ಮೊಂಬತ್ತಿ ಹಚ್ಚಿ ಗೌರವ ಸಲ್ಲಿಕೆ

06raju5
Published on

ಚಾಮರಾಜನಗರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 66ನೇ ವರ್ಷದ ಪರಿನಿಬ್ಬಾಣ ದಿನವನ್ನು ಮಂಗಳವಾರ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಮೊಂಬತ್ತಿಯನ್ನು ಹಚ್ಚಿ ಬಾಬಾ ಸಾಹೇಬರಿಗೆ ಗೌರವ ಸಲ್ಲಿಸಿದರು.


ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪಿ. ಮರಿಸ್ವಾಮಿ ಮಾತನಾಡಿ, ಶೋಷಿತ ಸಮಾಜಗಳಿಗೆ ಸಂವಿಧಾನಬದ್ಧವಾಗಿ ನ್ಯಾಯ ಕಲ್ಪಿಸಿಕೊಟ್ಟ ಧೀಮಂತ ನಾಯಕ ಡಾ.ಬಿ.ಆರ್.ಅಂಬೇಡ್ಕರ್. ಅಪಾರವಾದ ಪಾಂಡಿತ್ಯವನ್ನು ಪಡೆದುಕೊಳ್ಳುವ ಜತೆಗೆ ನನ್ನ ಸಮುದಾಯ ಮತ್ತು ಜನಕ್ಕೆ ಒಳ್ಳೆಯದನ್ನು ಮಾಡಬೇಕು. ಅವರು ನನ್ನಂಥ ಕಷ್ಟವನ್ನು ಎಂದಿಗೂ ಅನುಭವಿಸಬಾರದು ಎಂಬ ಉದ್ದೇಶದಿಂದ ಸಂವಿಧಾನ ರಚನೆ ಕರಡು ಸಮಿತಿ ಅಧ್ಯಕ್ಷರಾಗಿ ದೇಶದ ಅಭಿವೃದ್ಧಿಗೆ ಪೂರಕವಾದ ಸಂವಿಧಾನವನ್ನು ನೀಡುವ ಜತೆಗೆ ಸಾಮಾಜಿಕ ನ್ಯಾಯಕ್ಕೆ ಹೆಚ್ಚಿನ ಒತ್ತು ನೀಡಿದ್ದರು ಎಂದು ಬಣ್ಣಿಸಿದರು. ವಕೀಲ ಅರುಣ್‌ಕುಮಾರ್ ಮಾತನಾಡಿ, ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಆಶಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ನಾವೆಲ್ಲರೂ ಒಗ್ಗಟ್ಟಾಗಬೇಕಾಗಿದೆ ಎಂದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವ್, ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ಕೆ. ನಾಗರಾಜು, ಬ್ಲಾಕ್ ಅಧ್ಯಕ್ಷ ಮಹಮ್ಮದ್ ಅಸ್ಗರ್, ಸೈಯದ್ ರಫಿ, ಜಿಪಂ ಮಾಜಿ ಸದಸ್ಯರಾದ ಸಿ.ಎ. ಮಹದೇವಶೆಟ್ಟಿ, ಎಸ್. ಸೋಮನಾಯಕ, ರಮೇಶ್ ಮತ್ತು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net