

ಚಾಮರಾಜನಗರ: ತಾಲೂಕಿನ ಭೋಗಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಸೋಮವಾರ ಮತಯಾಚನೆ ಮಾಡಿದರು.
ಕೆ.ಬಸವನಪುರ, ಕೆಲ್ಲಂಬಳ್ಳಿ, ಕಲ್ಲಹಳ್ಳಿ, ಸಪ್ಪಯ್ಯನಪುರ, ಅನಹಳ್ಳಿ ಗ್ರಾಮಗಳಲ್ಲಿ ಕಾರ್ಯಕರ್ತರೊಂದಿಗೆ ಬಿರುಸಿನ ಪ್ರಚಾರ ನಡೆಸಿದ ಶಾಸಕರು, ಕ್ಷೇತ್ರದ ಅಭಿವೃದ್ಧಿಗೆ ಹಗಲಿರುಳೆನ್ನದೆ ಶ್ರಮವಹಿಸಿದ್ದೇನೆ. ನನ್ನ ಅಧಿಕಾರದ ಅವಧಿಯಲ್ಲಿ ಹಲವಾರು ಉತ್ತಮ ಕೆಲಸ ಕಾರ್ಯಗಳನ್ನು ಮಾಡಿದ್ದೇನೆ. ಮುಂಬರುವ ದಿನಗಳಲ್ಲಿ ಇನ್ನು ಹೆಚ್ಚಿನ ಅಭಿವೃದ್ಧಿ ಮಾಡಲು ಮತ್ತೊಮ್ಮೆ ಅವಕಾಶ ಕಲ್ಪಸಿಕೊಡುವಂತೆ ಮತದಾರರಲ್ಲಿ ಮನವಿ ಮಾಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ರಾಜ್ಯ ಪರಿಶಿಷ್ಟ ಪಂಗಡದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ನಾಯಕ್, ಎಪಿಎಂಸಿ ಮಾಜಿ ಅಧ್ಯಕ್ಷ ನಾಗೇಂದ್ರ, ಸದಸ್ಯ ಆಲೂರು ಪ್ರದೀಪ್, ತಾ,ಪಂ ಮಾಜಿ ಸದಸ್ಯ ಮಹಾಲಿಂಗು, ಮುಖಂಡರಾದ ಮಹೇಶ್‌ಕುಮಾರ್ ರಾಜು, ಸುಬೇಗೌಡ, ಮಹೇಶ್, ಮಹೇಶ್‌ಕುದರ್, ಸೋಮು, ಆರ್,ಉಮೇಶ್, ಕಾಗಲವಾಡಿ ಶಿವಸ್ವಾಮಿ ಇತರರು ಇದ್ದರು.