

ಚಾಮರಾಜನಗರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ಬಜೆಟ್ ಸರ್ವವ್ಯಾಪಿ, ಸರ್ವಸ್ಪರ್ಶಿಯಾಗಿದೆ ಎಂದು ಜಿಲ್ಲಾಧ್ಯಕ್ಷ ಜಿ. ನಾರಾಯಣಪ್ರಸಾದ್ ಹೇಳಿದರು. ಆಯವ್ಯಯದಲ್ಲಿ ಆರೋಗ್ಯ, ಶಿಕ್ಷಣ, ಕೃಷಿ, ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ, ಯುವಜನರಿಗೆ ಉದ್ಯೋಗವಕಾಶ ಸೇರಿದಂತೆ ಹಲವು ಯೋಜನೆಗಳನ್ನು ೋಷಣೆ ಮಾಡಲಾಗಿದ್ದು, ಎಲ್ಲ ವರ್ಗದವರಿಗೂ ತಲುಪುವಂತಹ ಸೌಲಭ್ಯಗಳನ್ನು ನೀಡಲಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೀಸಲಾತಿಯನ್ನು ಶೇ.15ರಿಂದ 17ಕ್ಕೆ ಹಾಗೂ ಶೇ.3ರಿಂದ 7ಕ್ಕೆ ಹೆಚ್ಚಿಸುವ ದೀರ್ಘಕಾಲದ ಬೇಡಿಕೆಯನ್ನು ಈಡೇರಿಸಿದೆ. ರೈತ ವಿದ್ಯಾನಿಧಿ ಯೋಜನೆಯನ್ನು ಕ್ಯಾಬ್ ಚಾಲಕರು, ಮೀನುಗಾರರು ಮತ್ತು ನೇಕಾರರ ಮಕ್ಕಳಿಗೂ ವಿಸ್ತರಣೆ ಮಾಡಲಾಗಿದೆ. ವಿದ್ಯಾಶಕ್ತಿ ಯೋಜನೆ ಮೂಲಕ ಪ್ರೌಢಶಾಲೆಯಲ್ಲಿ ತೇರ್ಗಡೆ ಹೊಂದುವ ಎಲ್ಲರಿಗೂ ಪದವಿವರೆಗೂ ವ್ಯಾಸಂಗ ಮಾಡುವ ಅವಕಾಶ ಒದಗಿಸಿದೆ. ಗೃಹಿಣಿ ಶಕ್ತಿ ಎಂಬ ಹೊಸ ಯೋಜನೆ ೋಷಣೆ ಮಾಡಲಾಗಿದೆ. ರೈಲು ಮಾರ್ಗಗಳ ಸಂಪರ್ಕ ಸುಧಾರಣೆ, ಆಸಿಡ್ ದಾಳಿಯ ಸಂತ್ರಸ್ತರಿಗೆ ಪರಿಹಾರ ಮೊತ್ತ ಹೆಚ್ಚಳ ಮಾಡಲಾಗಿದೆ ಎಂದು ವಿವರಿಸಿದರು.
ಹೆಣ್ಣುಮಕ್ಕಳ ಜನನ ಉತ್ತೇಜಿಸುವ ಸಲುವಾಗಿ ಭಾಗ್ಯಲಕ್ಷ್ಮಿಯೋಜನೆಯನ್ನು ಪರಿಚಯಿಸಲಾಗಿದ್ದು, ಬಿಪಿಎಲ್ ಕುಟುಂಬದ ಇಬ್ಬರು ಮಕ್ಕಳ ಹೆಸರಿನಲ್ಲಿ 15 ವರ್ಷದವರೆಗೆ ವಾರ್ಷಿಕ 3 ಸಾವಿರ ರೂ.ಗಳನ್ನು ಜಮಾ ಮಾಡಲಾಗುತ್ತದೆ. ಸಂಘಟಿತ ವಲಯದಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರಿಗೆ ಸರ್ಕಾರದ ವತಿಯಿಂದ ಉಚಿತ ಬಸ್ ಪಾಸ್ ಸೌಲಭ್ಯ ನೀಡಲು ಸರ್ಕಾರ ಪ್ರಸ್ತಾಪಿಸಿದೆ. ಇದಕ್ಕೆ 1 ಸಾವಿರ ಕೋಟಿ ರೂ. ಅನುದಾನ ಒದಗಿಸಲು ಮುಂದಾಗಿದೆ ಎಂದರು.
ಕಾಂಗ್ರೆಸ್‌ನವರು ಪೂರ್ವಾಗ್ರಹ ಪೀಡಿತರಾಗಿ ಬಜೆಟ್‌ಅನ್ನು ವಿರೋಧಿಸುತ್ತಿದ್ದಾರೆ. ಆಯವ್ಯಯ ಮಂಡನೆಗೂ ಮೊದಲೇ ಹೂ ತಂದು ಬಳಿಕ ಕಿವಿ ಮೇಲೆ ಇಟ್ಟುಕೊಂಡಿದ್ದಾರೆ. ಬಜೆಟ್ ಹೇಗೇ ಇದ್ದರೂ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿತ್ತು ಎಂದು ದೂರಿದರು.
ಚಾಮರಾಜನಗರ ಜಿಲ್ಲೆಗೆ ಬಜೆಟ್‌ನಲ್ಲಿ ಯಳಂದೂರಿನ ತಾಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಕೊಡುಗೆ ನೀಡಲಾಗಿದೆ. ರಾಜ್ಯ ಸರ್ಕಾರ ಒಂದು ಜಿಲ್ಲೆಗೆ ಸೀಮಿತವಾಗಿ ಬಜೆಟ್ ಮಂಡನೆ ಮಾಡಿಲ್ಲ. ಮುಂದಿನ ದಿನಗಳಲ್ಲಿ ಜಿಲ್ಲೆಗೆ ಅವಶ್ಯಕವಿರುವ ಯೋಜನೆಗಳನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಹೇಳಿದರು. ಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ನಾಗಶ್ರೀ ಪ್ರತಾಪ್, ಮಂಗಲ ಶಿವಕುಮಾರ್, ಕೆರೆಹಳ್ಳಿ ಮಹದೇವಸ್ವಾಮಿ, ಜಿಲ್ಲಾ ವಕ್ತಾರ ಅಯ್ಯನಪುರ ಶಿವಕುಮಾರ್, ಎಸ್ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಜಯಸುಂದರ್, ಜಿಲ್ಲಾ ಮಾಧ್ಯಮ ಪ್ರಮುಖ್ ಮಂಜು ಇದ್ದರು.