ಜನಪರ ಒಳ ಮೀಸಲಾತಿ

manjala shivakumar
Published on


ಚಾಮರಾಜನಗರ: ರಾಜ್ಯ ಸರ್ಕಾರ ಸಚಿವ ಸಂಪುಟದಲ್ಲಿ ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ನೀಡಲು ಕೇಂದ್ರಕ್ಕೆ ಶಿಾರಸು ಮಾಡಿರುವುದನ್ನು ಜಿಲ್ಲಾ ಬಿಜೆಪಿ ಕಮಿಟಿ ಸ್ವಾಗತಿಸುತ್ತದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಗಲ ಶಿವಕುಮಾರ್ ಹೇಳಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರವು ಜನಪರ ಕಾಳಜಿ ಹೊಂದಿದ್ದು, ಎಲ್ಲ ಸಮುದಾಯಗಳಿಗೂ ನ್ಯಾಯ ಒದಗಿಸುತ್ತಿದೆ. ಕರ್ನಾಟಕದಲ್ಲಿ ವಿವಿಧ ಸಮುದಾಯಗಳ ಹೋರಾಟದ ಲವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಳ ಮೀಸಲಾತಿಗೆ ಶಿಾರಸು ಮಾಡಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಿಎಂ ಬಸವರಾಜ ಬೊಮ್ಮಾಯಿ ಮೀಸಲಾತಿ ನೀಡುವ ವಿಚಾರದಲ್ಲಿ ದೊಡ್ಡ ಸವಾಲು ಎದುರಿಸಿದ್ದರು. ಜೇನುಗೂಡಿಗೆ ಕೈ ಹಾಕಿದ್ದೇವೆ, ಎಷ್ಟೇ ಕಷ್ಟವಾದರೂ ಸವಾಲು ಸ್ವೀಕರಿಸುತ್ತೇನೆ ಎಂದಿದ್ದರು. ಅದೇ ರೀತಿ ನುಡಿದಂತೆ ನಡೆದ ಸಿಎಂ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. ಈ ಹಿಂದೆ ದೇಶವನ್ನಾಳಿದ ಕಾಂಗ್ರೆಸ್ ಸರ್ಕಾರ ಸಮುದಾಯಗಳನ್ನು ಒಡೆಯುವ ಕೆಲಸ ಮಾಡಿತು. ಎಸ್ಸಿ, ಎಸ್ಟಿ, ಒಬಿಸಿಗಳಿಗೆ ಮೀಸಲಾತಿ ನೀಡದೆ ಯಾವುದೇ ಅನುಕೂಲ ಮಾಡಿಕೊಡಲಿಲ್ಲ. ಆದರೆ ಬಿಜೆಪಿ ಸರ್ಕಾರ ಮೀಸಲಾತಿ ವಿಚಾರದಲ್ಲಿ ಸಮಾನತೆ ತಂದಿದೆ ಎಂದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೃಷಭೇಂದ್ರಪ್ಪ, ಜಿಲ್ಲಾ ಕೋರ್ ಕಮಿಟಿ ಸದಸ್ಯ ಡಾ.ಬಾಬು, ಬಸವಣ್ಣ, ನಾಗರಾಜು, ಮಂಜುನಾಥ್, ಕೆರೆಹಳ್ಳಿ ಮಹದೇವಸ್ವಾಮಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net