31ರಂದು ಬಿಜೆಪಿ ಹಿಂದುಳಿದ ವರ್ಗಗಳ ಸಮಾವೇಶ

Published on

ಚಾಮರಾಜನಗರ: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಮಾ. 31ರಂದು ಹನೂರಿನಲ್ಲಿ ಹಿಂದುಳಿದ ವರ್ಗಗಳ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಮೋರ್ಚಾದ ಜಿಲ್ಲಾಧ್ಯಕ್ಷ ನಟರಾಜೇಗೌಡ ತಿಳಿಸಿದರು.


ಅಂದು ಬೆಳಗ್ಗೆ 11 ಗಂಟೆಗೆ ಹನೂರಿನ ಜಿ.ವಿ.ಗೌಡ ಕಾಲೇಜು ಪಕ್ಕದಲ್ಲಿ ಸಮಾವೇಶ ನಡೆಯಲಿದ್ದು, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯಾಧ್ಯಕ್ಷ ನೆಲ ನರೇಂದ್ರಬಾಬು, ರಾಜ್ಯ ಸಹ ಜಿಲ್ಲಾ ಉಸ್ತುವಾರಿ ಅಣ್ಣಾಮಲೈ, ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಸಂಸದ ಮೋಹನ್ ಇನ್ನಿತರರು ಭಾಗವಹಿಲಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.


ರಾಜ್ಯ ಕಾರ್ಯಕಾರಣಿ ಸದಸ್ಯ ವಕೀಲ ಚಿನ್ನಸ್ವಾಮಿ ಮಾತನಾಡಿ, ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲು ಪೂರಕವಾದ ವಾತಾವರಣ ನಿರ್ಮಾಣವಾಗಿದೆ. ಕೇಂದ್ರದಲ್ಲಿ ನರೇಂದ್ರ ಮೋದಿ, ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ಅವರ ಜನಪರ ಆಡಳಿತ ಶ್ರೀರಕ್ಷೆಯಾಗಿದೆ. ಜಿಲ್ಲೆಯ ಎಲ್ಲ ಮುಖಂಡರು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಪ್ರಾಮಾಣಿಕ ಪ್ರಯತ್ನ ಮಾಡೋಣ ಎಂದರು.


ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಜಿಲ್ಲೆಗೆ ಬರುವುದು ಬೇಡ ಎಂಬರ್ಥದ ಹೇಳಿಕೆಗಳು ಪಕ್ಷ ಸಂಘಟನೆಗೆ ವಿರುದ್ಧವಾಗಿವೆ. ಯಾರೇ ಇಂತಹ ಹೇಳಿಕೆ ನೀಡಿ, ಗೊಂದಲ ಸೃಷ್ಟಿ ಮಾಡುವುದು ಸರಿಯಲ್ಲ. ವರಿಷ್ಠರು ಸೂಚಿಸುವ ಅಭ್ಯರ್ಥಿ ಗೆಲುವಿಗೆ ನಾವೆಲ್ಲರೂ ಕೆಲಸ ಮಾಡೋಣ ಎಂದು ಹೇಳಿದರು. ಮೋರ್ಚಾದ ಜಿಲ್ಲಾ ಉಪಾಧ್ಯಕ್ಷ ಬೂದಬಾಳು ವೆಂಕಟಸ್ವಾಮಿ, ರಾಜ್ಯ ಕಾರ್ಯಕಾರಿಣಿ ಸದಸ್ಯ ವಕೀಲರಾದ ಚಿನ್ನಸ್ವಾಮಿ, ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ, ನಗರಮಂಡಲ ಅಧ್ಯಕ್ಷ ನಂದೀಶ್ ವಿಶ್ವಕರ್ಮ, ಪ್ರಧಾನಕಾರ್ಯದರ್ಶಿ ಶ್ರೀಕಾಂತ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net