

ಚಾಮರಾಜನಗರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾ.18 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಗ್ಗೆ 10.05ಕ್ಕೆ ಹನೂರು ತಾಲೂಕಿನ ಮಹದೇಶ್ವರ ಬೆಟ್ಟದ ಹೆಲಿಪ್ಯಾಡ್‌ಗೆ ಆಗಮಿಸುವರು. ಬಳಿಕ ಮಲೆ ಮಹದೇಶ್ವರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡುವರು. ಶ್ರೀ ಮಲೆ ಮಹದೇಶ್ವರ ಸ್ವಾಮಿ 108 ಅಡಿ ಎತ್ತರದ ಪ್ರತಿಮೆ ಉದ್ಘಾಟನೆ, ಬೆಳ್ಳಿರಥ ಮತ್ತು ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು. 11 ಗಂಟೆಗೆ ಬೆಂಗಳೂರಿಗೆ ತೆರಳುವರು.