ಇಂದು ಮುಖ್ಯಮಂತ್ರಿ ಜಿಲ್ಲಾ ಪ್ರವಾಸ

CM Siddaramayya
Published on

ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.12ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬೆಳಗ್ಗೆ 11.50ಕ್ಕೆ ಹೆಲಿಕಾಪ್ಟರ್ ಮೂಲಕ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದ ಹೆಲಿಪ್ಯಾಡ್‌ಗೆ ಆಗಮಿಸುವರು.

ಮಧ್ಯಾಹ್ನ 12.10ಕ್ಕೆ ಹೆಗ್ಗವಾಡಿ ಗ್ರಾಮಕ್ಕೆ ರಸ್ತೆ ಮೂಲಕ ಆಗಮಿಸಿ ದಿ.ಆರ್.ಧ್ರುವನಾರಾಯಣ ಅವರ ಮೊದಲನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 1.15ಕ್ಕೆ ಚಾಮರಾಜನಗರಕ್ಕೆ ಆಗಮಿಸುವರು. ಮಧ್ಯಾಹ್ನ 3 ಗಂಟೆಗೆ ನಗರದ ಡಾ. ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ಆಯೋಜಿಸಿರುವ ಚಾಮರಾಜನಗರ ಜಿಲ್ಲೆಯ ಸರ್ಕಾರದ ವಿವಿಧ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 4.30ಕ್ಕೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net