ಸ್ವಚ್ಛತಾ ಕಾರ್ಯಕ್ಕೆ ಚಾಲನೆ

7CHN01- NAGARA SABHE
Published on

ಚಾಮರಾಜನಗರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲೆಗೆ ಡಿ.12ರಂದು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರಸಭೆ ವತಿಯಿಂದ ನಗರದಲ್ಲಿ ಬುಧವಾರ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.


ನಗರದ ಬಿ.ರಾಚಯ್ಯ ಜೋಡಿ ರಸ್ತೆ ಸೇರಿದಂತೆ ಸಿಮೆಂಟ್ ರಸ್ತೆಗಳಲ್ಲಿ ಧೂಳು ತೆಗೆಯುವ ಕಾರ್ಯಕ್ಕೆ ನಗರಸಭೆ ಅಧ್ಯಕ್ಷೆ ಆಶಾ ನಟರಾಜು ಚಾಲನೆ ನೀಡಿದರು. ಡಿ.12 ರಂದು ಸಿಎಂ ಜಿಲ್ಲಾ ಕೇಂದ್ರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರವನ್ನು ಸ್ವಚ್ಛಗೊಳಿಸುವ ಕಾರ್ಯದಲ್ಲಿ ಈಗಾಗಲೇ ನಗರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿರತರಾಗಿದ್ದಾರೆ. ಕಡಿಮೆ ಅವಧಿ ಇರುವ ಕಾರಣ ನಗರದ ರಸ್ತೆಗಳ ಸ್ವಚ್ಛತೆಗೆ ಮೈಸೂರು ಮಹಾನಗರ ಪಾಲಿಕೆಯಿಂದ ಯಂತ್ರವನ್ನು ಪಡೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.


ನಗರ ಯೋಜನಾ ನಿರ್ದೇಶಕಿ ಪಿ.ಸುಧಾ, ಪೌರಾಯುಕ್ತ ರಾಮದಾಸ್, ಪರಿಸರ ಇಂಜಿನಿಯರ್ ಗಿರಿಜಮ್ಮ, ಹಿರಿಯ ಆರೋಗ್ಯ ನಿರೀಕ್ಷರಾದ ಸುಷ್ಮಾ, ಮಂಜುನಾಥ್, ಕಂದಾಯ ನಿರೀಕ್ಷಕ ನಾರಾಯಣ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net