ನಾಳೆ ಚಾ.ನಗರಕ್ಕೆ ರಾಹುಲ್ ಗಾಂಧಿ ಭೇಟಿ

b.k.ravikumar
Published on

ಚಾಮರಾಜನಗರ: ವಿಧಾನಸಭಾ ಚುನಾವಣೆ ಪ್ರಚಾರದ ಹಿನ್ನೆಲೆಯಲ್ಲಿ ಮೇ 1ರಂದು ಕಾಂಗ್ರೆಸ್ ಸಮಾವೇಶ ಹಮ್ಮಿಕೊಂಡಿದ್ದು, ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ, ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್ ತಿಳಿಸಿದರು.


ನಗರದ ಡಾ.ಬಿ.ಆರ್.ಅಂಬೇಡ್ಕರ ಜಿಲ್ಲಾ ಕ್ರೀಡಾಂಗಣಕ್ಕೆ ಅಂದು ಸಂಜೆ 4 ಗಂಟೆಗೆ ಹೆಲಿಕಾಪ್ಟರ್‌ನಲ್ಲಿ ಆಗಮಿಸಲಿದ್ದಾರೆ. ನಂತರ ಸಂತೇಮರಹಳ್ಳಿ ರಸ್ತೆಯ ರೇಷ್ಮೆ ಮಾರುಕಟ್ಟೆಯ ಬಳಿಯ ಖಾಸಗಿ ಜಮೀನಿನಲ್ಲಿ ಸಿದ್ಧಪಡಿಸಿರುವ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.


ಬಹಿರಂಗ ಸಭೆಯಲ್ಲಿ 15 ಸಾವಿರಾರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ. ಜಿಲ್ಲೆಯ ನಾಲ್ಕು ಕ್ಷೇತ್ರದ ಅಭ್ಯರ್ಥಿಗಳಾದ ಸಿ.ಪುಟ್ಟರಂಗಶೆಟ್ಟಿ, ಆರ್.ನರೇಂದ್ರ, ಎ.ಆರ್.ಕೃಷ್ಣಮೂರ್ತಿ, ಎಚ್.ಎಸ್.ಗಣೇಶ್‌ಪ್ರಸಾದ್ ಪರ ಪ್ರಚಾರ ನಡೆಯಲಿದೆ ಎಂದರು.


ಮೇ 4ರಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಗೆ ಆಗಮಿಸಿ ಬಹಿರಂಗ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂದು ಮಧ್ಯಾಹ್ನ 3.30ಕ್ಕೆ ಚಾಮರಾಜನಗರ ಮತ್ತು ಸಂಜೆ 6 ಗಂಟೆಗೆ ಗುಂಡ್ಲುಪೇಟೆಯಲ್ಲಿ ಬಹಿರಂಗ ಸಭೆಯಲ್ಲಿ ಭಾಗವಹಿಸುತ್ತಾರೆ ಎಂದು ವಿವರಿಸಿದರು.


ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಪಿ.ಮರಿಸ್ವಾಮಿ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಲತಾ, ಪ್ರಧಾನ ಕಾರ್ಯದರ್ಶಿ ಆರ್.ಮಹದೇವು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ, ಕಾಂಗ್ರೆಸ್ ಎಸ್ಸಿ ವಿಭಾಗದ ಜಿಲ್ಲಾಧ್ಯಕ್ಷ ಸೋಮೇಶ್, ಮುಖಂಡ ಸಿ.ಎ.ಮಹದೇವಶೆಟ್ಟಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net