

ಚಾಮರಾಜನಗರ: ಬಾಲಕಿಯನ್ನು ಪ್ರೀತಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದವನಿಗೆ ಮಕ್ಕಳ ಸ್ನೇಹಿ ಮತ್ತು 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 7 ವರ್ಷ ಕಠಿಣ ಶಿಕ್ಷೆ 5 ಸಾವಿರ ರೂ.ದಂಡ ವಿಧಿಸಿ ಶನಿವಾರ ತೀರ್ಪು ನೀಡಿದೆ.
ತಾಲೂಕಿನ ಮರಿಯಾಲ ಗ್ರಾಮದ ನಿವಾಸಿ ಪುಟ್ಟರಾಜು(26) ಶಿಕ್ಷೆಗೊಳಗಾದವನು. ಈತ 2017ರಲ್ಲಿ ಶಾಲಾ ಬಾಲಕಿಯನ್ನು ಪರಿಚಯ ಮಾಡಿಕೊಂಡಿದ್ದ. ಇಬ್ಬರೂ ಪ್ರೀತಿಸಿದ್ದರು. ಮದುವೆ ಮಾಡಿಕೊಂಡು ಚೆನ್ನಾಗಿ ನೋಡಿಕೊಳ್ಳುತ್ತೇನೆ ಎಂದು ನಂಬಿಸಿ ಬಿಳಿಗಿರಿರಂಗನಬೆಟ್ಟಕ್ಕೆ ಕರೆದುಕೊಂಡು ಹೋಗಿದ್ದ. ಅಲ್ಲಿ ಲೈಂಗಿಕವಾಗಿ ಹಿಂಸೆ ನೀಡಿದ್ದ. ನಂತರ ತನ್ನ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂದು ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.