

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು. ಜಿಪಂ ಅಧ್ಯಕ್ಷೆ ಎಂ.ಅಶ್ವಿನಿ, ಉಪಾಧ್ಯಕ್ಷೆ ಶಶಿಕಲಾ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಕನ್ನಡ ಪರ ಸಂಘಟನೆ ಮುಖಂಡ ನಿಜಧ್ವನಿ ಗೋವಿಂದರಾಜು, ಜೈ ಭುವನೇಶ್ವರಿ ಕನ್ನಡ ವೇದಿಕೆ ಅಧ್ಯಕ್ಷ ಜಿ.ಬಂಗಾರು, ತಹಸೀಲ್ದಾರ್ ಚಿದಾನಂದ ಗುರುಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಗಿರೀಶ್ ಸೇರಿದಂತೆ ಇತರರಿದ್ದರು.