

ಚಾಮರಾಜನಗರ: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಮತಗಟ್ಟೆಗಳಲ್ಲಿ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸಿರುವ ಬಗ್ಗೆ ಅಕಾರಿಗಳು ವ್ಯಾಪಕವಾಗಿ ಪರಿಶೀಲಿಸಿ ಖಾತ್ರಿಪಡಿಸಿಕೊಳ್ಳಬೇಕೆಂದು ಜಿಲ್ಲಾಕಾರಿ ಡಿ.ಎಸ್.ರಮೇಶ್ ಸೂಚನೆ ನೀಡಿದರು.
ನಗರದ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಚುನಾವಣಾ ಪೂರ್ವ ಸಿದ್ಧತಾ ಕಾರ್ಯಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮತಗಟ್ಟೆಗಳಲ್ಲಿ ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಶೌದಗೃಹ, ಪೀಠೋಪಕರಣ, ವಿಶೇಷ ಚೇತನರಿಗೆ ರ‌್ಯಾಂಪ್ ಸೇರಿದಂತೆ ಎಲ್ಲ ಮೂಲಸೌಲಭ್ಯಗಳನ್ನು ಒದಗಿಸಬೇಕು. ಯಾವುದೇ ಕೆಲಸಗಳಿದ್ದರೂ ತುರ್ತಾಗಿ ಪೂರ್ಣಗೊಳಿಸಬೇಕು. ಸಂಬಂಧಪಟ್ಟ ಅಕಾರಿಗಳು ಮತಗಟ್ಟೆಗಳಿಗೆ ಭೇಟಿ ನೀಡಿ ಸೌಲಭ್ಯ ಕಲ್ಪಿಸಿರುವ ಬಗ್ಗೆ ಪರಿಶೀಲಿಸಬೇಕು ಎಂದು ಹೇಳಿದರು.
ವಿಧಾನಸಭಾ ಕ್ಷೇತ್ರವಾರು ಚುನಾವಣಾಕಾರಿಗಳು ನಾಮಪತ್ರ ಸ್ವೀಕರಿಸುವ ಕಚೇರಿ, ಸಿಬ್ಬಂದಿ ನಿಯೋಜನೆ ಬಗ್ಗೆ ಮಾಹಿತಿ ಪರಿಶೀಲಿಸಿದ ಜಿಲ್ಲಾಕಾರಿ, ಜಿಲ್ಲಾ ಕೇಂದ್ರ ಹಾಗೂ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 24*7 ಕಂಟ್ರೋಲ್ ರೂಂ. ಸ್ಥಾಪನೆ ಹಾಗೂ ನಿರ್ವಹಣೆ ಮಾಡುವ ಸಂಬಂಧ ಅಗತ್ಯ ಕ್ರಮವಹಿಸುವಂತೆ ಅಕಾರಿಗಳಿಗೆ ಸೂಚಿಸಿದರು. ಹೆಚ್ಚುವರಿ ಮಾಸ್ಟರ್ ಟ್ರೈನರ್‌ಗಳನ್ನು ನೇಮಕ ಮಾಡಬೇಕು. ಸಿ- ವಿಜಿಲ್, ಸುವಿಧಾ, ಕಂಟ್ರೋಲ್ ರೂಂ ನಿರ್ವಹಣೆಗೆ ತಂಡಗಳನ್ನು ರಚನೆ ಮಾಡಬೇಕು. ಚುನಾವಣಾ ಕೆಲಸ ಕಾರ್ಯಗಳಿಗೆ ಅಗತ್ಯವಾದ ವಾಹನಗಳ ವಿವರವನ್ನು ಒದಗಿಸಬೇಕು. ಮತಗಟ್ಟೆ ಮಟ್ಟದ ಅಕಾರಿಗಳ ನೇಮಕ ಸಂಬಂಧ ಪ್ರಸ್ತುತ ಹಂತದ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದರು.
ಮತದಾನ ಜಾಗೃತಿ ಕಾರ್ಯಕ್ರಮಗಳ ಆಯೋಜನೆಗೆ ಕೈಗೊಂಡಿರುವ ಕ್ರಮಗಳು, ಚುನಾವಣೆಗೆ ಸಂಬಂಸಿದಂತೆ ಕೈಗೊಳ್ಳಲಾಗಿರುವ ಇನ್ನಿತರ ಸಿದ್ದತೆಗಳನ್ನು ಜಿಲ್ಲಾಕಾರಿ ಡಿ.ಎಸ್. ರಮೇಶ್ ವಿವರವಾಗಿ ಪರಿಶೀಲಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಪದ್ಮಿನಿ ಸಾಹೂ, ಉಪವಿಭಾಗಾಕಾರಿ ಗೀತಾ ಹುಡೇದ, ತಹಸೀಲ್ದಾರ್‌ಗಳಾದ ಬಸವರಾಜು, ರವಿಶಂಕರ್, ಮಂಜುಳಾ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೆಶಕ ಮಲ್ಲಿಕಾರ್ಜುನ್, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಯೋಗಾನಂದ, ಜಂಟಿ ಕೃಷಿ ನಿರ್ದೇಶಕ ಮಧುಸೂಧನ್, ಪ್ರಾದೇಶಿಕ ಸಾರಿಗೆ ಅಕಾರಿ ಸುಧಾಮಣಿ, ಭೂ ದಾಖಲೆಗಳ ಉಪನಿರ್ದೇಶಕಿ ವಿದ್ಯಾಯಿನಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಶಿವಪ್ರಸಾದ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಕಾರಿ ಮಂಜುಳಾ, ಶಿಕ್ಷಣ ಅಕಾರಿ ಮಂಜುನಾಥ್, ಪಶುಪಾಲನೆ ಇಲಾಖೆಯ ಉಪನಿರ್ದೇಶಕ ಡಾ. ಶಿವಣ್ಣ, ಇನ್ನಿತರ ಅಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.