ಸಾಲಬಾಧೆಯಿಂದ ಮಹಿಳೆ ಆತ್ಮಹತ್ಯೆ

Crime Logo
Published on

ಗುಂಡ್ಲುಪೇಟೆ: ತಾಲೂಕಿನ ತೆರಕಣಾಂಬಿ ಪೊಲೀಸ್ ಠಾಣೆ ವ್ಯಾಪ್ತಿಯ ಪಡಗೂರು ಗ್ರಾಮದಲ್ಲಿ ಖಾಸಗಿ ಫೈನಾನ್ಸ್ ಕಿರುಕುಳದಿಂದ ಮನನೊಂದ ಮಹಿಳೆಯೊಬ್ಬರು ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗ್ರಾಮದ ಮಹದೇವಶೆಟ್ಟಿ ಎಂಬುವರ ಪತ್ನಿ ಸಿದ್ದಮ್ಮ (40) ಮೃತ. ಅಂಗನವಾಡಿ ಕೇಂದ್ರದಲ್ಲಿ ಅಡುಗೆ ಸಹಾಯಕಿಯಾಗಿದ್ದ ಸಿದ್ದಮ್ಮ ಚಾಮರಾಜನಗರ ಹಾಗೂ ಪಟ್ಟಣದ ಖಾಸಗಿ ಫೈನಾನ್ಸ್ ಕಂಪನಿಯಿಂದ 1 ಲಕ್ಷ ರೂ. ಸಾಲ ಪಡೆದಿದ್ದರು. ಆದರೆ ಈ ತಿಂಗಳು ಸಾಲ ಕಟ್ಟಲು ಫೈನಾನ್ಸ್‌ನವರು ಒತ್ತಾಯಿಸಿದ ಹಿನ್ನೆಲೆಯಲ್ಲಿ ಮನನೊಂದು ಮನೆಯಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ತೆರಕಣಾಂಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net