

ಚಾಮರಾಜನಗರ: ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದು, ಇವರ ವಿರುದ್ಧ ಸರ್ಕಾರ ಕಾನೂನು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಅಖಿಲ ಕರ್ನಾಟಕ ಕನ್ನಡ ಮಹಾಸಭೆ ಪದಾಕಾರಿಗಳು ನಗರದಲ್ಲಿ ಹೆಚ್ಚುವರಿ ಜಿಲ್ಲಾಕಾರಿ ಎಸ್.ಕಾತ್ಯಾಯಿನಿದೇವಿ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಮಹಾಸಭಾದ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಬೆಂಗಳೂರು ಜೈನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕಿರುನಾಟಕ ಪ್ರದರ್ಶನ ಮಾಡುತ್ತಿದ್ದ ವೇಳೆ ಅಂಬೇಡ್ಕರ್ ಅವರನ್ನು ಅಪಮಾನ ಮಾಡಲಾಗಿದೆ. ಅದು ದೇಶ ವಿರೋ ನಾಟಕವಾಗಿದ್ದು, ಅದನ್ನು ವಿರೋಸುವ ಬದಲೂ ಪ್ರೋತ್ಸಾಹ ನೀಡಿರುವುದು ನಾಗರಿಕ ಸಮಾಜ ತಲೆತಗ್ಗಿಸುವ ಸಂಗತಿಯಾಗಿದೆ ಎಂದು ಆರೋಪಿಸಿದರು. ಅಂಬೇಡ್ಕರ್ ಹಾಗೂ ದಲಿತ ಸಮುದಾಯದ ಬಗ್ಗೆ ಅಪಹಾಸ್ಯ, ಅವಮಾನ ಮಾಡಿರುವ ವಿದ್ಯಾರ್ಥಿಗಳ ವಿರುದ್ಧ ಕಾನೂನು ಕ್ರಮ ಕೈಗೊಂಡು ವಿದ್ಯಾಲಯದ ಮಾನ್ಯತೆಯನ್ನು ರದ್ದುಪಡಿಸಬೇಕು. ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಲಾಗುವುದು ಎಂದು ಎಚ್ಚರಿಸಿದರು. ಮಹಾಸಭೆ ಕಾರ್ಯದರ್ಶಿ ಪಣ್ಯದ ಹುಂಡಿರಾಜು, ರವಿಚಂದ್ರಪ್ರಸಾದ್ ಕಹಳೆ ಚಿಕ್ಕಮೋಳೆ ಸಿದ್ದಶೆಟ್ಟಿ ಇದ್ದರು.