

ಚಾಮರಾಜನಗರ: ಪಶು ಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯು ಜುಲೈ 24 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ನೂತನ ಕೆಡಿಪಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಎಸ್. ಪೂವಿತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.