ಅಪರಿಚಿತ ಶವ ಪತ್ತೆ

Published on

ಕೊಳ್ಳೇಗಾಲ: ಪಟ್ಟಣದ ಹೊಸಅಣಗಳ್ಳಿ ಬಳಿ ಸೋಮವಾರ ಅಪರಿಚಿತ ಗಂಡಸಿನ ಶವ ಪತ್ತೆಯಾಗಿದೆ. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸುಮಾರು 55 ರಿಂದ 60 ವರ್ಷದ ವ್ಯಕ್ತಿ ಶವ ಇದ್ದಾಗಿದೆ. ಹೊಸಅಣಗಳ್ಳಿ ಬಡಾವಣೆಯ ಎದುರಿನ ರಾಷ್ಟ್ರೀಯ ಹೆದ್ದಾರಿ ರಸ್ತೆ ಫುಟ್‌ಪಾತ್ ಬಳಿ ದೊರೆತಿದೆ. ಕಾಯಿಲೆಗೆ ಒಳಗಾಗಿ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಮರಣೋತ್ತರ ಪರೀಕ್ಷೆ ನಡೆಸಿ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net