ಮರಡಿಗುಡ್ಡದ ಮಹದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ

17kglphoto-4...
Published on

ಕೊಳ್ಳೇಗಾಲ: ಭೀಮನ ಅಮಾವಾಸ್ಯೆ ಪ್ರಯುಕ್ತ ಸೋಮವಾರ ಮರಡಿಗುಡ್ಡದ ಮಹದೇಶ್ವರ ದೇವಾಲಯಕ್ಕೆ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದ ಸಾವಿರಾರು ಭಕ್ತರು ಭೇಟಿ ನೀಡಿ ಶ್ರದ್ಧಾ-ಭಕ್ತಿಯಿಂದ ಪೂಜೆಸಲ್ಲಿಸಿದರು.

ಬೆಳಗ್ಗೆಯಿಂದಲೆ ಮರಡಿ ಮಹದೇಶ್ವರನಿಗೆ ರುದ್ರಾಭಿಷೇಕ, ಮಹಾಮಂಗಳಾರತಿ ವಿವಿಧ ಪೂಜೆಗಳನ್ನು ಸಲ್ಲಿಸಲಾಯಿತು. ಮಧ್ಯಾಹ್ನ 12 ಗಂಟೆಯಿಂದ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿತ್ತು, ಸಂಜೆ 7 ಗಂಟೆವರೆಗೂ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ಅರ್ಚಕ ಶ್ರೀನಿವಾಸ್ ವಿವಿಧ ಪೂಜಾ ಕೈಂಕರ್ಯ ನೆರವೇರಿಸಿದರು. ಭದ್ರತೆಗೆ ಪೊಲೀಸ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಶ್ರೀ ಮಲೈ ಮಹದೇಶ್ವರ ಅನ್ನದಾಸೋಹ ಕುಟುಂಬ ಟ್ರಸ್ಟ್ ಪದಾಧಿಕಾರಿಗಳು ಭಕ್ತರಿಗೆ ಅನ್ನ ಸಂತರ್ಪಣೆ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net