ಸ್ವಸಹಾಯ ಸಂಘ ಉದ್ಘಾಟನೆ

DSC_0026 (1)
Published on

ಚಾಮರಾಜನಗರ: ಜಿಲ್ಲೆಯ ಎಲ್ಲ ಗ್ರಾಮಗಳಲ್ಲೂ ಸ್ವಸಹಾಯ ಸಂಘಗಳು ಸ್ಥಾಪನೆಯಾದರೆ ಸಂಘಟಿತ ಅಭಿವೃದ್ಧಿಗೆ ನೆರವಾಗಲಿದೆ ಎಂದು ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ತಿಳಿಸಿದರು.


ತಾಲೂಕಿನ ಹರದನಹಳ್ಳಿ ಗ್ರಾಮದ ಮಾರಮ್ಮನ ದೇವಸ್ಥಾನದ ಮುಂಭಾಗ ಬುಧವಾರ ಅಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಾಮದೇನು ಸ್ವಸಹಾಯ ಸಂಘವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು. ಭಾರತೀಯ ಸಂಸ್ಕೃತಿಯಲ್ಲಿ ಗೋವುಗಳಿಗೆ ವಿಶೇಷ ಸ್ಥಾನವಿದೆ. ಕುಲಕಸುಬಾಗಿದ್ದ ಹೈನುಗಾರಿಕೆ ಪ್ರಧಾನ ಉದ್ಯೋಗವಾಗುತ್ತಿದೆ. ಮೊದಲೆಲ್ಲ ಶ್ರೀಮಂತ ಉದ್ಯಮಿಗಳ ಗುಂಪು ಸಂಘಗಳನ್ನು ಸ್ಥಾಪಿಸುತ್ತಿದ್ದರು. ದಿನ ಕಳೆದಂತೆ ಜನಸಾಮಾನ್ಯರೂ ಒಟ್ಟುಗೂಡಿ ಸಂಘ ಸ್ಥಾಪನೆ ಮಾಡುತ್ತಿದ್ದಾರೆ. ಹರದನಹಳ್ಳಿಯ ಕಾಮಧೇನು ಸ್ವ-ಸಹಾಯ ಸಂಘಕ್ಕೆ ಶುಭವಾಗಲಿ ಎಂದು ಆಶಿಸಿದರು.


ಸಂಘದ ಮೂಲಕ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು ದೊರೆಯಲಿ. ಶಿಕ್ಷಣಕ್ಕೆ ಸಾಲ ನೀಡಿ ಉನ್ನತ ವ್ಯಾಸಂಗ ಮಾಡಲು ಬಯಸುವ ಮಕ್ಕಳಿಗೆ ಒಳ್ಳೆಯದಾಗಲಿ. ಅವರು ವಿದ್ಯಾಭ್ಯಾಸ ಮುಗಿಸಿ ಉನ್ನತ ಹುದ್ದೆ ಅಲಂಕರಿಸಿದರೆ ಸಂಘವನ್ನು ಸ್ಮರಿಸುತ್ತಾರೆ. ಗ್ರಾಮದಲ್ಲಿ ಪಶು ಆಸ್ಪತ್ರೆ ನಿರ್ಮಾಣ ಮಾಡುವ ಕುರಿತು ಸರ್ಕಾರದ ಗಮನ ಸೆಳೆಯಲಾಗುವುದು ಎಂದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಶೋದಮ್ಮ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಆರ್.ಸುಂದರ್, ಚಾಮುಲ್ ನಿರ್ದೇಶಕ ಎಚ್.ಎಸ್.ಬಸವರಾಜು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಎಸ್.ಸೋಮನಾಯಕ, ರಾಜ್ಯ ಕಾಂಗ್ರೆಸ್ ಎಸ್ಟಿ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸನಾಯಕ, ಸುಂದರ್, ಸಂಘದ ಅಧ್ಯಕ್ಷ ಕೃಷ್ಣ, ಉಪಾಧ್ಯಕ್ಷ ಮಹದೇವ, ಕಾರ್ಯದರ್ಶಿ ರಾಮಣ್ಣನಾಯಕ ಮತ್ತು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net