ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಜ್ಜುಗೊಳಿಸಿ

10raju5
Published on

ಚಾಮರಾಜನಗರ: ತಾಲೂಕಿನ ಮರಿಯಾಲ ಗ್ರಾಮದ ಶ್ರೀ ಮುರುಘ ರಾಜೇಂದ್ರ ಸ್ವಾಮಿ ವಿದ್ಯಾ ಸಂಸ್ಥೆಯಲ್ಲಿ ಶಾರದಾ ಪೂಜೆ ಮತ್ತು ಬೀಳ್ಕೊಡುಗೆ ಸಮಾರಂಭ ನಡೆಯಿತು.


ಶಾಲಾ ಆವರಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಮಠದ ಪೀಠಾಧಿಪತಿ ಶ್ರೀ ಇಮ್ಮಡಿ ಮುರುಘರಾಜೇಂದ್ರ ಸ್ವಾಮೀಜಿ, 10ನೇ ತರಗತಿ ವಿದ್ಯಾರ್ಥಿಗಳು ಉತ್ತಮವಾಗಿ ಓದಿ ಅಧಿಕ ಅಂಕ ಗಳಿಸಬೇಕು ಎಂದು ಸಲಹೆ ನೀಡಿದರು. ಪರೀಕ್ಷೆಯಲ್ಲಿ ಸಾಧನೆ ಮಾಡಿ ಪಾಲಕರಿಗೆ ಹೆಸರು, ಕೀರ್ತಿ ತರಬೇಕು. ಶೈಕ್ಷಣಿಕ ವರ್ಷದಲ್ಲಿ ವಿದ್ಯಾಸಂಸ್ಥೆಗೆ ಉತ್ತಮ ಲಿತಾಂಶ ಬರುವಂತೆ ವಿದ್ಯಾರ್ಥಿಗಳನ್ನು ಶಿಕ್ಷಕರು ಸಜ್ಜುಗೊಳಿಸಬೇಕು ಎಂದು ಹೇಳಿದರು.


ನಿವೃತ್ತಿ ಹೊಂದಿದ ಶಾಲೆ ಶಿಕ್ಷಕ ವಿರೂಪಾಕ್ಷ ಅವರನ್ನು ಇದೇ ವೇಳೆ ಸನ್ಮಾನ ಮಾಡಿ ಬೀಳ್ಕೊಡುಗೆ ನೀಡಲಾಯಿತು. ಮುಖ್ಯ ಶಿಕ್ಷಕ ಪ್ರಸನ್ನ ವಿದ್ಯಾರ್ಥಿಗಳಿಗೆ ಪರೀಕ್ಷೆ ಸಿದ್ಧತೆ ಕುರಿತು ಮಾರ್ಗದರ್ಶನ ನೀಡಿದರು. ಶಿಕ್ಷಕರಾದ ಎಸ್.ಮಂಜುನಾಥ, ಮಹದೇವಸ್ವಾಮಿ, ಮಹದೇವಮೂರ್ತಿ, ವಿರೂಪಾಕ್ಷಪ್ಪ, ಎಂ.ಆರ್.ಸ್ವಾಮಿ, ಆರ್.ಡಿ.ನಾಗರಾಜು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net