ಶಾಸಕ ಸಿ.ಪುಟ್ಟರಂಗಶೆಟ್ಟಿಗೆ ಅಭಿನಂದನೆ

20raju3
Published on

ಚಾಮರಾಜನಗರ: ತಾಲೂಕಿನ ಕೋಡಿಮೋಳೆ ಗ್ರಾಮದ ಸಿ.ಪುಟ್ಟರಂಗಶೆಟ್ಟಿ ಅಭಿಮಾನಿಗಳ ಬಗಳದ ವತಿಯಿಂದ ನಗರದ ಪ್ರವಾಸಿ ಮಂದಿರದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಮಂಗಳವಾರ ಸನ್ಮಾನ ಮಾಡಲಾಯಿತು.

ಭಗತ್ ಸಿಂಗ್ ಯುವ ಸೇನೆ ಅಧ್ಯಕ್ಷ ಕಾಂತರಾಜು ಮಾತನಾಡಿ, ಶಾಸಕರು ಕೋಡಿಮೋಳೆ ಗ್ರಾಮಕ್ಕೆ ರಸ್ತೆ, ಚರಂಡಿ ಮತ್ತು ಕುಡಿಯುವ ನೀರು ಕಲ್ಪಿಸಲು ಹೆಚ್ಚಿನ ಆದ್ಯತೆ ನೀಡಬೇಕು ಎಂದರು. ಮಳೆಗಾಲ ಬರುವ ಮುಂಚೆ ಶೀಘ್ರದಲ್ಲೇ ಗ್ರಾಮದ ಬಿಳಿಗಿರಿರಂಗನ ಬೆಟ್ಟದ ಮುಖ್ಯ ರಸ್ತೆಯ ಬದಿಯಲ್ಲಿ ಚರಂಡಿ ನಿರ್ಮಾಣ ಮಾಡಬೇಕು ಹಾಗೂ ಗ್ರಾಮಕ್ಕೆ ಮೂಲಸೌಕರ್ಯ ಕಲ್ಪಿಸಿಕೊಡಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.
ಶಿವು, ಮಣಿ, ರವಿ, ಕೃಷ್ಣ, ಕಿರಣ್ ಕೆ., ವಿಜಯ್, ಮನೋಜ್, ರಾಜೇಂದ್ರ, ಕಾರ್ತಿಕ್, ಮಂಜು, ಮನು, ಪ್ರಕಾಶ್ ಹಾಗೂ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net