ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮಕ್ಕಳಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಮಕ್ಕಳ ಹಬ್ಬ ಚಿಗುರು ಕಾರ್ಯಕ್ರಮವನ್ನು ಡಿ.8ರಂದು ಬೆಳಗ್ಗೆ 11 ಗಂಟೆಗೆ ಕೊಳ್ಳೇಗಾಲ ತಾಲೂಕಿನ ಮುಳ್ಳೂರಿನ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಎನ್.ಮಹೇಶ್ ಅಧ್ಯಕ್ಷತೆ ವಹಿಸುವರು. ಸಂಸದ ವಿ. ಶ್ರೀನಿವಾಸಪ್ರಸಾದ್, ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಆರ್. ನರೇಂದ್ರ, ಸಿ.ಎಸ್. ನಿರಂಜನಕುಮಾರ್, ಮರಿತಿಬ್ಬೇಗೌಡ, ಡಾ.ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು ಜಿ. ಮಾದೇಗೌಡ, ಕಾಡಾ ಅಧ್ಯಕ್ಷ ಜಿ. ನಿಜಗುಣರಾಜು, ಮುಳ್ಳೂರು ಗ್ರಾಪಂ ಅಧ್ಯಕ್ಷೆ ಎಂ.ಚಂದ್ರಕಲಾ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಮೈಸೂರು ವಿಭಾಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನಸ್ವಾಮಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.