ಉತ್ತಮ ಅಭ್ಯರ್ಥಿ ಆಯ್ಕೆಗೆ ಮತದಾನ ಮಾಡಿ

29rajesh2
Published on

ಚಾಮರಾಜನಗರ: ಜಿಲ್ಲೆಯಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮತದಾನ ಏ.26ರಂದು ನಡೆಯಲಿದ್ದು, ಉತ್ತಮ ಅಭ್ಯರ್ಥಿಯ ಆಯ್ಕೆಗಾಗಿ ಎಲ್ಲರೂ ತಪ್ಪದೇ ಕಡ್ಡಾಯವಾಗಿ ಮತದಾನ ಮಾಡುವಂತೆ ಅಜ್ಜೀಪುರ ಗ್ರಾಮ ಪಂಚಾಯತಿ ಕಾರ್ಯದರ್ಶಿ ಶ್ರೀನಿವಾಸ್ ತಿಳಿಸಿದರು.

ಹನೂರು ತಾಲೂಕಿನ ಅಜ್ಜೀಪುರ ಗ್ರಾಮ ಪಂಚಾಯತಿಯಲ್ಲಿ ಬುಧವಾರ ನಡೆದ ತಾಲೂಕು ಸ್ವೀಪ್ ಸಮಿತಿಯಿಂದ ಆಯೋಜಿಸಿದ್ದ ಮತದಾನದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಾರ್ವಜನಿಕರು ಯಾವುದೇ ಆಮಿಷಗಳಿಗೆ ಒಳಗಾಗದೆ ನಿಷ್ಪಕ್ಷಪಾತವಾಗಿ ಮತ ಚಲಾಯಿಸಬೇಕು. ಮತದಾನ ನಿಮ್ಮ ಮುಂದಿನ ಪೀಳಿಗೆಯ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.ಮತದಾನ ಮಾಡುವುದು ಬಹಳ ಪವಿತ್ರವಾದ ಕೆಲಸ. ನಮ್ಮ ದೇಶವನ್ನು ಅಭಿವೃದ್ಧಿ ಪಡಿಸುವ ಒಬ್ಬ ಸೂಕ್ತವಾದ ಅಭ್ಯರ್ಥಿ ಆಯ್ಕೆ ಮಾಡಲು ಎಲ್ಲರೂ ತಪ್ಪದೇ ಮತದಾನ ಮಾಡಿ ಎಂದರು.

ಅಜ್ಜೀಪುರ ಶಾಲೆಯ ಮಕ್ಕಳು ಪೋಷಕರಿಗೆ ಕಡ್ಡಾಯವಾಗಿ ಮತದಾನ ಮಾಡುವಂತೆ ನಡೆಸಿದ ಮತದಾನದ ಮಮತೆಯ ಕರೆಯೋಲೆಗಮನ ಸೆಳೆಯಿತು. ಇದೇ ಸಂಧರ್ಭದಲ್ಲಿ ಮತದಾನ ಜಾಗೃತಿವಿಡಿಯೋ ಮತ್ತು ಜಿಂಗಲ್ಸ್‌ಗಳ ಮೂಲಕ ಸಾರ್ವಜನಿಕರಿಗೆಮತ ಚಲಾವಣೆಯ ಮಹತ್ವದ ಅರಿವು ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತಿ ಮಹೇಶ್, ಗ್ರಾಮ ಪಂಚಾಯತಿ ದಾಸ್, ಇಕ್ರಂ, ಶಾಲಾ ಶಿಕ್ಷಕರು, ಮಹಿಳಾ ಸ್ವ ಸಹಾಯ ಸಂಘದ ಸದಸ್ಯರು ಹಾಗೂ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net