ಕರ್ತವ್ಯ ಲೋಪ ಪಿಡಿಓ ಅಮಾನತು

c.n.kavya
Published on

ಚಾಮರಾಜನಗರ: ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಚಾಮರಾಜನಗರ ತಾಲೂಕಿನ ನಾಗವಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಿ.ಎನ್ ಕಾವ್ಯ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಎಸ್. ಪೂವಿತಾ ಆದೇಶಿಸಿದ್ದಾರೆ.

ಪಂಚಾಯಿತಿ ಅಭಿವೃದ್ದಿ ಅಧಿಕಾರಿಯಾದ ಕಾವ್ಯ ಪೂರ್ವಾನುಮತಿ ಪಡೆಯದೇ ಗೈರು ಹಾಜರಾಗಿರುವುದು, ನರೇಗಾ ಯೋಜನೆ ಅನುಷ್ಠಾನದಲ್ಲಿ ಮಾರ್ಗಸೂಚಿ ಉಲ್ಲಂಘನೆ, ಬಿಲ್ಲು ಪಾವತಿ ಸಂದರ್ಭದಲ್ಲಿ ಪರಿಶೀಲಿಸಿ ಅನುಮೋದನೆ ನೀಡದೇ ಪಾವತಿಸಿರುವುದು, ಇ-ಸ್ವತ್ತು ವಹಿ, ನಮೂನೆಗಳ ನಿರ್ವಹಣೆ ಮಾಡದಿರುವುದೂ ಸೇರಿದಂತೆ ಇನ್ನೂ ಇತರೆ ಕರ್ತವ್ಯ ಲೋಪದ ಬಗ್ಗೆ ವರದಿ ಸಲ್ಲಿಕೆಯಾಗಿತ್ತು.

ಈ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ವಿಚಾರಣೆ ಕಾಯ್ದಿರಿಸಿ ಸೇವೆಯಿಂದ ಕಾವ್ಯ ಅವರನ್ನು ಅಮಾನತು ಮಾಡಿರುವುದಾಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಎಸ್. ಪೂವಿತಾ ಆದೇಶದಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net