ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಚಾಮರಾಜನಗರ ಉಪವಿಭಾಗ ವ್ಯಾಪ್ತಿಯಲ್ಲಿ 4ನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಜ.7ರಂದು ಹಮ್ಮಿಕೊಂಡಿರುವುದರಿಂದ ಅಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಪಣ್ಯದಹುಂಡಿ ವ್ಯಾಪ್ತಿಯ ಬದನಗುಪ್ಪೆ, ಪಣ್ಯದಹುಂಡಿ, ಬೆಂಡರವಾಡಿ, ಕೆಲ್ಲಂಬಳ್ಳಿ ಎನ್‌ಜೆವೈ, ಇಂಡಸ್ಟ್ರಿಯಲ್ ಏರಿಯಾ, ಕೆಇಡಿಪಿ 10 ಮತ್ತು 11, ಮುತ್ತಿಗೆ, ಹೆಗ್ಗೋಠಾರ ಹಾಗೂ ಬದನಗುಪ್ಪೆ ವ್ಯಾಪ್ತಿಯ ಕೆಐಎಡಿಬಿ ಇಂಡಸ್ಟ್ರೀಯಲ್ ಏರಿಯಾ ಮರಿಯಾಲ, ಬೇಡರಪುರ, ಕೆಲ್ಲಂಬಳ್ಳಿ, ಬಸವನಪುರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ವಿದ್ಯುತ್ ಸಂಬಂಧಿತ ದೂರು ಮತ್ತು ಸಹಾಯಕ್ಕಾಗಿ ಗ್ರಾಹಕರು ಉಚಿತ ದೂ.1912 ಸಂಪರ್ಕಿಸುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.