

ಚಾಮರಾಜನಗರ: ತಾಲೂಕಿನ ಹರದನಹಳ್ಳಿ ಗ್ರಾಮದ ಹ.ರಾ.ಮಹೇಶ್ ಅವರು ತುಮಕೂರು ವಿಶ್ವ ವಿದ್ಯಾಲಯದ ಸ್ನಾತಕೋತ್ತರ ಸಮಾಜಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಪ್ರೊ.ಬಿ.ರಮೇಶ್ ಮಾರ್ಗದರ್ಶನದಲ್ಲಿ ಮಂಡಿಸಿದ ‘ಗೌತಮ ಬುದ್ಧ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ರಾಜಕೀಯ ತತ್ವಜ್ಞಾನ ಮತ್ತು ಸಮಕಾಲೀನ ದಲಿತ ರಾಜಕಾರಣದಲ್ಲಿ ಅವುಗಳ ಪ್ರಸ್ತುತತೆ’ ಎಂಬ ಪ್ರಬಂಧಕ್ಕೆ ತುಮಕೂರು ವಿಶ್ವ ವಿದ್ಯಾಲಯ ಪಿಎಚ್.ಡಿ ಪದವಿ ನೀಡಿದೆ.