ಪೌರಕಾರ್ಮಿಕರ ಪ್ರತಿನಿಧಿಯಾಗಿ ಲೋಕಸಭೆಗೆ ಸ್ಪರ್ಧೆ

f8dfcb5f-c3fb-4fc6-ac51-5db1facd593b
Published on

ಚಾಮರಾಜನಗರ: ಪೌರಕಾರ್ಮಿಕರು ಮತ್ತು ಸಾಯಿ ಕರ್ಮಚಾರಿಗಳ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುವ ನಿಟ್ಟಿನಲ್ಲಿ ಪೌರಕಾರ್ಮಿಕರ ಪ್ರತಿನಿಧಿಯಾಗಿ ಈ ಬಾರಿಯ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ತೀರ್ಮಾನಿಸಿದ್ದೇನೆ ಎಂದು ಕವಿ ಹಾಗೂ ಜಿಲ್ಲಾ ಸಾಯಿ ಕರ್ಮಚಾರಿ ವಿಚಕ್ಷಣ ಸಮಿತಿ ಸದಸ್ಯ ಸಿ.ಶಂಕರ ಅಂಕನಶೆಟ್ಟಿಪುರ ಹೇಳಿದರು.

ಸಾಹಿತ್ಯ ಮತ್ತು ಪತ್ರಿಕೋದ್ಯಮದ ಹಲವು ವರ್ಷಗಳ ಕಾಲ ಸೇವೆಸಲ್ಲಿಸುವ ಜತೆಗೆ ಜಿಲ್ಲಾ ಸಾಯಿ ಕರ್ಮಚಾರಿ ವಿಚಕ್ಷಣ ಸಮಿತಿ ಸದಸ್ಯನಾಗಿ ಪ್ರಾಮಾಣಿಕ ಸೇವೆಯನ್ನು ಸಲ್ಲಿಸಿದ್ದೇನೆ. ಜಿಲ್ಲಾ ಕೇಂದ್ರದಲ್ಲಿ ಪೌರಕಾರ್ಮಿಕರ ಭವನ ಮತ್ತು ವಿದ್ಯಾರ್ಥಿನಿಲಯ ಹಾಗೂ ಸ್ಮಶಾನಕ್ಕೆ ಜಮೀನು ಮೀಸಲು ಇರಿಸಲು ಶ್ರಮಿಸಿದ್ದೇನೆ. ಹಲವಾರು ಪೌರಕಾರ್ಮಿಕರ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ಮಾಡಿಸುವ ನಿಟ್ಟಿನಲ್ಲಿ ಕೆಲಸ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಪೌರಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದೇನೆ ಎಂದು ಸೋಮವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಚಾಮರಾಜನಗರ ಕ್ಷೇತ್ರದಲ್ಲಿ ಪೌರಕಾರ್ಮಿಕರು ಹಾಗೂ ಇನ್ನಿತರೆ ಸಮುದಾಯಗಳನ್ನು ಒಳಗೊಂಡಂತೆ ಒಂದು ಲಕ್ಷಕ್ಕೂ ಅಧಿಕ ಮತಗಳು ನನ್ನ ಪರವಾಗಿದೆ. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಈ ಬಾರಿಯ ಚುನಾವಣೆಯಲ್ಲಿ ನನಗೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು. ಗೋಷ್ಠಿಯಲ್ಲಿ ಮಹೇಶ್ ಅಂಕನಶೆಟ್ಟಿಪುರ, ಸತೀಶ್ ಬಸವಪುರ, ಮಲ್ಲೇಶ್, ಎಂ.ರಾಜೇಂದ್ರ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net