

ಚಾಮರಾಜನಗರ: ಚಾ.ನಗರ ಲೋಕಸಭೆ ಕ್ಷೇತ್ರದ ಚುನಾವಣೆ ಸಂಬಂಧ ಮಾ.29 ರಂದು ಬೆಳಗ್ಗೆ 11 ಗಂಟೆಗೆ ನಗರದ ನಂಜನಗೂಡು ರಸ್ತೆಯ ಖಾಸಗಿಕಲ್ಯಾಣಮಂಟಪದಲ್ಲಿ ಪೂರ್ವಭಾವಿ ಹಮ್ಮಿಕೊಳ್ಳಲಾಗಿದೆ ಎಂದು ಎಂಎಸ್‌ಐಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.
ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿಕಚೇರಿಯಲ್ಲಿ ನಡೆದ ಪಕ್ಷದ ಪದಾಧಿಕಾರಿಗಳು, ಮುಖಂಡರು ಮತ್ತು ಕಾರ್ಯಕರ್ತರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂದಿನ ಸಭೆಯಲ್ಲಿ ಮೈಸೂರುಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್ ಸೇರಿದಂತೆ ಪಕ್ಷದ ಶಾಸಕರು ಭಾಗವಹಿಸುವರು. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ 5 ಗ್ಯಾರಂಟಿಗಳನ್ನು ಜಾರಿಗೆ ತಂದು ಜನರಿಗೆ ಅನೂಕೂಲ ಮಾಡಿಕೊಟ್ಟಿದೆ. ಇವುಗಳನ್ನು ಮುಂದಿಟ್ಟುಕೊಂಡು ಪಕ್ಷ ಚುನಾವಣೆ ಎದುರಿಸಬೇಕಿದೆ ಎಂದರು.
ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈಯ್ಯನ್ನು ಬಲಪಡಿಸಬೇಕು, ಮಾ.29 ರಂದು ನಡೆಯುವ ಪೂರ್ವಭಾವಿ ಸಭೆಯಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು ಹೆಚ್ಚಿನಸಂಖೈಯಲ್ಲಿ ಭಾಗವಹಿಸಬೇಕು. ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವಂತೆ ಮನವಿ ಮಾಡಿದರು.
ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಯೋಜನೆಗಳನ್ನು ಪ್ರತಿಯೊಬ್ಬ ಮತದಾರರಿಗೂ ಮನವರಿಕೆ ಮಾಡಿಕೊಡಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಪ್ರದಾನ ಕಾರ್ಯದರ್ಶಿಗಳಾದ ಚಿಕ್ಕಮಹಾದೇವ್, ಆರ್.ಮಹಾದೇವ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಹಮದ್ ಅಸ್ಗರ್, ಎ.ಎಸ್.ಗುರುಸ್ವಾಮಿ, ಒಬಿಸಿ ರಾಜ್ಯಪ್ರಧಾನಕಾರ್ಯದರ್ಶಿ ಸಿ.ಎ.ಮಹದೇವಶೆಟ್ಟಿ, ಎಸ್ಟಿಮೋರ್ಚಾ ಪ್ರದಾನ ಕಾರ್ಯದರ್ಶಿ ಪು.ಶ್ರೀನಿವಾಸನಾಯಕ, ಎಪಿಎಂಸಿ ಸದಸ್ಯ ಎ.ಎಸ್.ಪ್ರದೀಪ್, ಕೆ.ಪಿ.ಸದಾಶಿವಮೂರ್ತಿ, ಅರಕಲವಾಡಿ ಸೋಮನಾಯಕ, ಕಾವೇರಿ, ಕನಿಷ್ಠ ವೇತನಸಲಹಮಂಡಳಿ ಮಾಜಿ ಅಧ್ಯಕ್ಷ ಉಮೇಶ್, ನಗರಸಭೆಸದಸ್ಯ ಆರ್.ಪಿ.ನಂಜುಂಡಸ್ವಾಮಿ, ಅಲ್ಪಸಂಖ್ಯಾತರ ವಿಭಾಗದ ಮಹಮದ್ ಅಪ್ಜಲ್ ಷರೀಪ್, ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ನಲ್ಲೂರು ಸೋಮೇಶ್, ಕಾರ್ಮಿಕವಿಭಾಗದ ಅಧ್ಯಕ್ಷ ಸ್ವಾಮಿ, ರೂಪೇಶ್, ಎಪಿಎಂಸಿ ಮಾಜಿಅಧ್ಯಕ್ಷ ಡಿ.ನಾಗೇಂದ್ರ,
ಮುಖಂಡರಾದ ಬದನಗುಪ್ಪೆ ನಾಗರಾಜಮೂರ್ತಿ, ಸಯ್ಯದ್‌ರಫಿ, ನಸ್ರುಲ್ಲಖಾನ್, ಚುಡಾಮಾಜಿ ಅಧ್ಯಕ್ಷ ಸುಹೇಲ್ ಆಲಿಖಾನ್, ನಯಾಜ್, ಆಯೂಬ್‌ಖಾನ್ ಹಾಗೂ ಇತರರು ಹಾಜರಿದ್ದರು.