ಹಸುವಿನ ಮೇಲೆ ಚಿರತೆ ದಾಳಿ

Published on

ಚಾಮರಾಜನಗರ: ನಗರದ ಹೊರವಲಯದಲ್ಲಿರುವ ಹರದನಹಳ್ಳಿ ಫಾರಂ ಹೌಸ್ ಸಮೀಪದ ಜಮೀನಿನಲ್ಲಿ ಹಸುವಿನ ಮೇಲೆ ಚಿರತೆ ದಾಳಿ ಮಾಡಿದ್ದು, ಗಂಭೀರ ಗಾಯಗಳಾಗಿದೆ.

ನಗರದ ಸೋಮವಾರಪೇಟೆ ಬಡಾವಣೆಯ ನಂಜುಂಡಸ್ವಾಮಿ ಎಂಬುವವರಿಗೆ ಸೇರಿದ ಹಸುವನ್ನು ಅವರದ್ದೇ ಜಮೀನಿನಲ್ಲಿ ಮೇಯಲು ಬಿಟ್ಟಿದ್ದ ವೇಳೆಯಲ್ಲಿ ಮಂಗಳವಾರ ಮಧ್ಯಾಹ್ನ ಚಿರತೆ ದಾಳಿ ಮಾಡಿದ್ದು, ಹಸುವಿನ ಕುತ್ತಿಗೆಯನ್ನು ಹಿಡಿದ ಪರಿಣಾಮವಾಗಿ ಗಂಭೀರ ಗಾಯವಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ನಗರಸಭೆ ಮಾಜಿ ಸದಸ್ಯ ಮಹದೇವಯ್ಯ ವಿಜಯವಾಣಿ ಜತೆಗೆ ಮಾತನಾಡಿ, ಸೋಮವಾರಪೇಟೆ ಮತ್ತು ಹರದನಹಳ್ಳಿ ಸುತ್ತ ಮುತ್ತಲಿನ ಜಮೀನುಗಳಲ್ಲಿ ಇತ್ತೀಚೆಗೆ ಚಿರತೆ ಹಾಗೂ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ರೈತರು ಭಯದ ವಾತಾವರಣದಲ್ಲಿ ಬದುಕು ನಡೆಸುವಂತಾಗಿದೆ. ಸಂಬಂಧಪಟ್ಟ ಅರಣ್ಯ ಅಧಿಕಾರಿಗಳು ಇತ್ತ ಗಮನಹರಿಸಿ ಚಿರತೆಯನ್ನು ಸೆರೆ ಹಿಡಿಯಬೇಕು ಎಂದು ಮನವಿ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net