ಪ್ರತಿಯೊಬ್ಬರು ನೈತಿಕ ಮತದಾನ ಮಾಡಿ

29rajesh3
Published on

ಚಾಮರಾಜನಗರ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ತಪ್ಪದೇ ಕಡ್ಡಾಯವಾಗಿ ಮತದಾನ ಮಾಡಿ ಎಂದು ಗುಂಡ್ಲುಪೇಟೆ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ರಾಮಲಿಂಗಯ್ಯ ತಿಳಿಸಿದರು.

ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಗ್ರಾಮ ಪಂಚಾಯಿತಿಯಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶವನ್ನು ಮುನ್ನಡೆಸಲು ನಿಮ್ಮ ಒಂದು ಮತ ಬಹಳ ಅಮೂಲ್ಯವಾದದ್ದು. ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸಿ ಮೂಲಸೌಕರ್ಯ ಒದಗಿಸುವ ಅರ್ಹ ವ್ಯಕ್ತಿಯನ್ನು ಆಯ್ಕೆ ಮಾಡಬೇಕು. ಯಾವುದೇ ಆಮಿಷಗಳಿಗೆ ಒಳಗಾಗದೆ ನಿಷ್ಪಕ್ಷಪಾತವಾಗಿ ಮತಚಲಾಯಿಸಬೇಕು. ಮತದಾನ ನಿಮ್ಮ ಮುಂದಿನ ಪೀಳಿಗೆಗೆ ಭವಿಷ್ಯ ರೂಪಿಸುವಲ್ಲಿ ತನ್ನದೇ ಆದ ಪಾತ್ರವಹಿಸುತ್ತದೆ ಎಂದು ತಿಳಿಸಿದರು.

ಇದೇ ವೇಳೆ ಮತದಾನ ಜಾಗೃತಿಯ ಜಿಂಗಲ್ಸ್‌ಗಳ ಮೂಲಕ ಸಾರ್ವಜನಿಕರಲ್ಲಿ ಮತ ಚಲಾವಣೆಯ ಮಹತ್ವದ ಬಗ್ಗೆ ಅರಿವು ಮೂಡಿಸಲಾಯಿತು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹದೇವಸ್ವಾಮಿ ಅವರು ಗ್ರಾಮೀಣ ಸಂತೆಯಲ್ಲಿ ನೆರೆದಿದ್ದ ರೈತರಿಗೆ ಕಡ್ಡಾಯ ಮತದಾನದ ಪ್ರತಿಜ್ಞಾ ವಿಧಿ ಭೋದಿಸಿದರು.

ಈ ಸಂದರ್ಭದಲ್ಲಿ ಸಹಾಯಕ ಯೋಜನಾಧಿಕಾರಿ ಶ್ರೀನಿವಾಸ್, ತಾಲೂಕು ಪಂಚಾಯತಿ ನೀಲಕಂಠ, ಯತೀಶ, ಶಿವಕುಮಾರ್, ಗ್ರಾಮ ಪಂಚಾಯತಿ ಕಾರ್ಯದರ್ಶಿ ಎಂ.ರಾಜು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಹಾಗೂ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net