ಜಿಎನ್‌ಎನ್ ವಿರುದ್ಧ ನ್ಯಾಯಾಲಯಕ್ಕೆ ದೂರು

ab85faff-16c0-4728-84a6-83f13b9567ca
Published on

ಕೊಳ್ಳೇಗಾಲ: ಕೇಂದ್ರ ಗೃಹ ಸಚಿವ ಅಮಿತ್ ಷಾ ಬಗ್ಗೆ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ನಿಂದಿಸಿ ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿರುವ ಬೆನ್ನಲ್ಲೇ ಕೊಳ್ಳೇಗಾಲ ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್.ಮಹೇಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದು. ಇದೀಗ ಎನ್.ಮಹೇಶ್ ಅವರು ಜಿಎನ್‌ಎನ್ ವಿರುದ್ಧ ಚುನಾವಣಾ ಆಯೋಗ ಹಾಗೂ ನ್ಯಾಯಾಲಯಕ್ಕೆ ದೂರು ನೀಡಲು ಮುಂದಾಗಿದ್ದಾರೆ.

ಈ ಬಗ್ಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್.ಮಹೇಶ್ ಮಾತನಾಡಿ, ಜಿ.ಎನ್ ನಂಜುಂಡಸ್ವಾಮಿ ಅವರು ನನ್ನ ಮೇಲೆ ಅವಹೇಳನಕಾರಿಯಾಗಿ ಆರೋಪ ಮಾಡಿದ್ದಾರೆ. ಇದು ಸಾರ್ವಜನಿಕ ವಲಯದಲ್ಲಿ ನನ್ನ ಮೇಲೆ ಅನುಮಾನ ಮೂಡುವಂತೆ ಮಾಡುತ್ತದೆ. ಆದ್ದರಿಂದ ಜಿಎನ್‌ಎನ್ ವಿರುದ್ಧ ಚುನಾವಣಾ ಆಯೋಗ ಹಾಗೂ ನ್ಯಾಯಾಲಯಕ್ಕೆ ದೂರು ನೀಡುತ್ತೇನೆ. ಅದಕ್ಕೆ ಬೇಕಾದ ಎಲ್ಲ ಸಿದ್ಧತೆ ಕೈಗೊಳ್ಳುತ್ತಿದ್ದೇನೆ. ಅವರು ನನ್ನ ಮೇಲೆ ಆರೋಪ ಮಾಡಿರುವುದನ್ನು ನ್ಯಾಯಾಲಯದಲ್ಲಿ ಸಾಬೀತು ಮಾಡಲಿ. ಈ ಬಗ್ಗೆ ಕೊಳ್ಳೇಗಾಲಕ್ಕೆ ಆಗಮಿಸಿ ವಿಸ್ತೃತವಾಗಿ ತಿಳಿಸುತ್ತೇನೆ ಎಂದರು.

ಕೊಳ್ಳೇಗಾಲ ಪಟ್ಟಣದಲ್ಲಿ ಗುರುವಾರ ಆಯೋಜಿಸಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಅವರು, ಮಾಜಿ ಶಾಸಕ ಎನ್.ಮಹೇಶ್ ಸಮಾಜಘಾತುಕ ವ್ಯಕ್ತಿ. ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿಗಳಿಗೆ ಏನೂ ಮಾಡಿಲ್ಲ ಎಂದು ಎನ್.ಮಹೇಶ್ ಹೇಳುತ್ತಾರೆ. ಇವರು ಹಿಂದೆ ಶಿಕ್ಷಣ ಸಚಿವರಾಗಿದ್ದಾಗ ವಿದ್ಯಾರ್ಥಿಗಳಿಗೆ ಶೂ ಮತ್ತು ಸಾಕ್ಸ್ ಕೊಡುವ ವಿಚಾರದಲ್ಲಿ 30 ಕೋಟಿ ರೂ. ಹೊಡೆದು ಜಾಗ ಖಾಲಿ ಮಾಡಿದರು ಎಂದು ಆರೋಪಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net