ಚಾಮರಾಜನಗರ: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಸಲು ಐದನೇ ದಿನವಾದ ಬುಧವಾರ 5 ಅಭ್ಯರ್ಥಿಗಳಿಂದ 12 ನಾಮಪತ್ರಗಳು ಸಲ್ಲಿಕೆಯಾಗಿವೆ.
ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸುನೀಲ್ ಬೋಸ್ 4 ನಾಮಪತ್ರಗಳು ಹಾಗೂ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾಗಿ ಎಸ್.ಬಾಲರಾಜ್ 3 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಪಕ್ಷೇತರ ಅಭ್ಯರ್ಥಿಗಳಾಗಿ ಬಲ್ಲಯ್ಯ 3 ನಾಮಪತ್ರ ಹಾಗೂ ಎಚ್.ಕೆ. ಸ್ವಾಮಿ ಮತ್ತು ಸಣ್ಣಸ್ವಾಮಿ ಎಂಬುವರು ತಲಾ 1 ನಾಮಪತ್ರಗಳು ಸಲ್ಲಿಸಿದ್ದಾರೆ.
ಒಟ್ಟಾರೆ ಇದುವರೆಗೆ 16 ಅಭ್ಯರ್ಥಿಗಳಿಂದ 26 ನಾಮಪತ್ರಗಳು ಸಲ್ಲಿಕೆಯಾಗಿವೆ. ನಾಮಪತ್ರದೊಂದಿಗೆ ಸಲ್ಲಿಸಿರುವ ಅಫಿಡವಿಟ್ ಪ್ರತಿಯನ್ನು ಭಾರತ ಚುನಾವಣಾ ಆಯೋಗದ ವೆಬ್‌ಸೈಟ್ ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಚುನಾವಣಾಧಿಕಾರಿಗಳ ಕಾರ್ಯಾಲಯದ ಸೂಚನಾ ಫಲಕದಲ್ಲಿ ನಾಮಪತ್ರದ ನಕಲು ಪ್ರತಿ ಮತ್ತು ಅಫಿಡವಿಟ್ ಅನ್ನು ಪ್ರಚುರ ಪಡಿಸಲಾಗಿದೆ ಎಂದು ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಶಿಲ್ಪಾನಾಗ್ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಗೀತಾ ಹುಡೇದಾ ಉಪಸ್ಥಿತರಿದ್ದರು.