ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಲು ಸೂಚನೆ

Published on

ಚಾಮರಾಜನಗರ: ಲೋಕಸಭಾ ಚುನಾವಣೆಯ ಮೊದಲನೇ ಹಂತದ ಮತದಾನ ಏ.26ರಂದು ಹಾಗೂ ಎರಡನೇ ಹಂತದ ಮತದಾನ ಮತ್ತು ಸುರಪುರ ಕ್ಷೇತ್ರದ ಉಪ ಚುನಾವಣೆಯು ಮೇ 7ರಂದು ನಡೆಯಲಿದ್ದು, ಎಲ್ಲ ಅಂಗಡಿ, ವಾಣಿಜ್ಯ ಸಂಸ್ಥೆಗಳು, ಹೋಟೆಲ್‌ಗಳು, ಕಾರ್ಖಾನೆಗಳು ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡುವಂತೆ ಕಾರ್ಮಿಕ ಇಲಾಖೆ ತಿಳಿಸಿದೆ.

1963ರ (ರಾಷ್ಟ್ರೀಯ ಹಾಗೂ ಹಬ್ಬದ ರಜಾ ದಿನಗಳು) ಕಾಯ್ದೆಯ ಕಲಂ3-ಎ ಹಾಗೂ ಪ್ರಜಾ ಪ್ರತಿನಿಧಿ ಕಾಯ್ದೆಯ ಕಲಂ 135(ಬಿ) ರಡಿಯಲ್ಲಿ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲ ಸಂಸ್ಥೆಗಳು/ನಿಯೋಜಕರು ಅನುವು ಮಾಡಿಕೊಡಬೇಕೆಂದು ಕೇಂದ್ರ ಚುನಾವಣಾ ಆಯೋಗವು ಸೂಚನೆ ನೀಡಿದೆ. ಆದೇಶವನ್ನು ಉಲ್ಲಂಘಿಸಿದರೆ ಸಂಬಂಧಪಟ್ಟ ಸಂಸ್ಥೆ/ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದೆಂದು ಕಾರ್ಮಿಕ ಅಧಿಕಾರಿ ಎಂ. ಸವಿತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net