ಸಿಮ್ಸ್‌ನಲ್ಲಿ 3ನೇ ಘಟಿಕೋತ್ಸವ ನಾಳೆ

Published on

ಚಾಮರಾಜನಗರ: ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಘಟಿಕೋತ್ಸವ ಸಮಾರಂಭ (2018-19ನೇ ಶೈಕ್ಷಣಿಕ ವರ್ಷ ಪೂರೈಸಿದ)ವನ್ನು ಏ.6 ರಂದು ಸಿಮ್ಸ್‌ನಲ್ಲಿ ಆಯೋಜಿಸಲಾಗಿದೆ.

ಅಂದು ಬೆಳಗ್ಗೆ 10 ಗಂಟೆಗೆ ಪ್ರಾರಂಭವಾಗುವ ಕಾರ್ಯಕ್ರಮದಲ್ಲಿ ಬೆಂಗಳೂರು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಎಸ್.ಸಚ್ಚಿದಾನಂದ, ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಶ್ರೀನಿವಾಸ ಪ್ರಸಾದ್, ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ ಡೀನ್ ಡಾ.ಎಚ್.ಜಿ.ಮಂಜುನಾಥ್, ಸಿಮ್ಸ್ ಪ್ರಾಂಶುಪಾಲ ಡಾ.ಗಿರೀಶ್ ವಿ.ಪಾಟೀಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಚಿದಂಬರ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಚ್.ಎಸ್.ಕೃಷ್ಣ ಪ್ರಸಾದ್ ಪಾಲ್ಗೊಳ್ಳುವರು. ಸಂಜೆ 6 ಗಂಟೆಗೆ ಪದವಿ ಪೂರೈಸಿದ ವೈದ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಸಿಮ್ಸ್ ಡೀನ್ ಹಾಗೂ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net