ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ

6-kglphoto-2,, )
Published on

ಕೊಳ್ಳೇಗಾಲ: ಪಟ್ಟಣದ ಲಯನ್ಸ್ ಶಾಲೆಯಲ್ಲಿ 2023-24ನೇ ಸಾಲಿನ ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ಕೇರಂ ಬೋರ್ಡ್ ಸ್ಪರ್ಧೆಯನ್ನು ಶನಿವಾರ ಆಯೋಜಿಸಲಾಗಿತ್ತು.

ಕಳೆದ ಮೂರು ದಿನಗಳಿಂದ 5ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೇರಂ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ವಿಮನ್, ನಂದನ್, ಹೇಮಂತ್, ರಮ್ಯಾ, ಪ್ರೀತಿ, ಮಿಲನಾ ಪ್ರಥಮ ಸ್ಥಾನ ಪಡೆದುಕೊಂಡರು. ಹೇಮಂತ್, ಆನಂದ್, ರಶ್ಮಿತಾ, ಮಾನಿ ಹಾಗೂ ನೂರಪ್ಸ ದ್ವಿತೀಯ ಸ್ಥಾನ ಪಡೆದುಕೊಂಡರು. ಇವರಿಗೆ ಲಯನ್ಸ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಕಾರ್ಯದರ್ಶಿ ಜಿಎಸ್‌ಎಂ ಪ್ರಸಾದ್ ಬಹುಮಾನ ವಿತರಣೆ ಮಾಡಿದರು.

ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಎಸ್. ನಾಗರಾಜು, ಲಯನ್ಸ್ ಶಾಲೆಯ ಮುಖ್ಯಶಿಕ್ಷಕ ಶ್ರೀಕಾಂತ್, ಸಹ ಶಿಕ್ಷಕ ಗಿಲ್‌ಬರ್ಟ್, ದೈಹಿಕ ಶಿಕ್ಷಣ ಶಿಕ್ಷಕ ಜಾನ್ ಇಮ್ಯಾನುವೇಲ್, ನಂಜುಂಡಮೂರ್ತಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net