ಚಾ.ನಗರ ಅಭಿವೃದ್ಧಿಗೆ ಕಾಂಗ್ರೆಸ್ ಬೆಂಬಲಿಸಿ

07rajesh4
Published on

ಚಾಮರಾಜನಗರ: ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅವಧಿಯಲ್ಲಿ ಸಾಕಷ್ಟು ಅನುದಾನವನ್ನು ನೀಡಿ ಅಭಿವೃದ್ಧಿ ಮಾಡಿದ್ದು, ಸರ್ವರ ಜನಾಂಗದ ಅಭಿವೃದ್ಧಿಯ ದೃಷ್ಟಿಯಿಂದ ಕಾಂಗ್ರೆಸ್ ಬೆಂಬಲಿಸಿ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು.

ತಾಲೂಕಿನ ಮಂಗಲ, ಮಂಗಲ ಹೊಸೂರು, ಹುಲ್ಲೇಪುರ, ಮಹಾಂತಾಳಪುರ, ಕರಡಿಮೋಳೆ, ಯಡಿಯೂರು, ಸಪ್ಪಯ್ಯನಪುರ, ಬೋಗಾಪುರ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಗ್ರಾಮಗಳಲ್ಲಿ ಮನೆ ಮನೆಗೆ ತೆರಳುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಸುನಿಲ್‌ಬೋಸ್ ಪರ ಮತಯಾಚನೆ ಮಾಡಿ ಮಾತನಾಡಿದರು.

ಕಾಂಗ್ರೆಸ್ ನುಡಿದಂತೆ ನಡೆದ ಪಕ್ಷವಾಗಿದೆ. ಅನ್ನಭಾಗ್ಯ, ಶಕ್ತಿ ಯೋಜನೆ, ಯುವನಿಧಿ, ಗೃಹಜ್ಯೋತಿ, ಗೃಹಲಕ್ಷ್ಮಿ ಈ ಐದು ಗ್ಯಾರೆಂಟಿಗಳನ್ನು ಸಮರ್ಪಕವಾಗಿ ಜಾರಿಮಾಡಿರುವಂತಹ ಏಕೈಕ ಪಕ್ಷ ಎಂದರೆ ಅದು ಕಾಂಗ್ರೆಸ್ ಮಾತ್ರವೇ. ಯಾವಾಗಲೂ ಕೂಡಾ ಜನಪರವಾಗಿ, ಬಡವರ ಪರವಾಗಿ ಕಾಂಗ್ರೆಸ್ ಕೆಲಸ ಮಾಡುತ್ತಿದೆ. ಎಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಮನವಿ ಮಾಡಿದರು.

ನಮ್ಮ ಕಾಂಗ್ರೆಸ್ ಪಕ್ಷದಿಂದ ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸುನಿಲ್ ಬೋಸ್ ಅವರು ಸ್ಪರ್ಧಿಸಿದ್ದು, ಎಲ್ಲರ ಸಹಕಾರದಿಂದ ತಮ್ಮ ಮತಗಳನ್ನು ನೀಡುವ ಮೂಲಕ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಬೇಕಾಗಿದೆ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ, ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್.ಗುರುಸ್ವಾಮಿ, ಮಹಮದ್‌ಅಸ್ಗರ್, ಹಿಂದುಳಿದ ವರ್ಗಗಳ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎ. ಮಹದೇವಶೆಟ್ಟಿ, ಕೋಡಿಮೋಳೆ ಪ್ರಕಾಶ್, ಎಪಿಎಂಸಿ ಮಾಜಿ ಅಧ್ಯಕ್ಷ ನಾಗೇಂದ್ರ, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ನಾಗಯ್ಯ, ಕಾರ್ಮಿಕ ವಿಭಾಗದ ಜಿಲ್ಲಾ ಕಾರ್ಯಾಧ್ಯಕ್ಷ ಮೂರ್ತಿ, ಮಂಗಲ ಗ್ರಾ.ಪಂ. ಅಧ್ಯಕ್ಷ ಅಣ್ಣಪ್ಪಸ್ವಾಮಿ, ಮಾಜಿ ಅಧ್ಯಕ್ಷ ಶಿವಣ್ಣ, ನಂಜುಂಡಶೆಟ್ಟಿ, ಶಿವಣ್ಣ, ಮಹದೇವಸ್ವಾಮಿ, ದೊರೆಸ್ವಾಮಿ, ಅಕ್ಷಯ್, ಮೋಹನ್ ನಗು, ರಾಜೀವ್, ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಕೆಲ್ಲಂಬಳ್ಳಿ ಸೋಮು, ತಾ.ಪಂ. ಮಾಜಿ ಸದಸ್ಯ ಮಹಾಲಿಂಗು, ನಂಜುಂಡಯ್ಯ, ಎಂ.ಕುಮಾರ್ ಮತ್ತು ಗ್ರಾ.ಪಂ. ಸದಸ್ಯರು, ಪಕ್ಷದ ಮುಖಂಡರು ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net