ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

07rajesh7
Published on

ಚಾಮರಾಜನಗರ: ತಾಲೂಕಿನ ಬಂದಿಗೌಡನಹಳ್ಳಿ ಗ್ರಾಮದ ಅನೇಕ ಮುಖಂಡರು ಬಿಜೆಪಿ ತೊರೆದು ಶಾಸಕ ಸಿ.ಪುಟ್ಟರಂಗಶೆಟ್ಟಿ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಶಾಸಕ ಸಿ. ಪುಟ್ಟರಂಗಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್ ಅವರು ಪಕ್ಷದ ಶಾಲ್ಯ ಹಾಕಿ ಮುಖಂಡರನ್ನು ಸ್ವಾಗತಿಸಿದರು. ಗ್ರಾಮದ ಮುಖಂಡರಾದ ಸೋಮಶೇಖರ್, ಎನ್. ಮಲ್ಲೇಶ್, ಮಂಜುನಾಥ್, ಮಹೇಶ್, ಆನಂದ, ಬಿ.ಎಂ. ಮಲ್ಲೇಶ್, ಸೇರಿದಂತೆ ಅನೇಕರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಈ ವೇಳೆ ಶಾಸಕ ಸಿ. ಪುಟ್ಟರಂಗಶೆಟ್ಟಿ, ಬಿಜೆಪಿ ಕೇವಲ ಧರ್ಮ, ಜಾತಿ ಹೆಸರಿನಲ್ಲಿ ರಾಜಕಾರಣ ಮಾಡುವ ಮೂಲಕ ದೇಶದಲ್ಲಿ ಗೊಂದಲ ಸೃಷ್ಠಿ ಮಾಡುತ್ತಿದೆ. ಆದರೆ, ಕಾಂಗ್ರೆಸ್ ತತ್ವ ಸಿದ್ದಾಂತಗಳೊಂದಿಗೆ ಕಳೆದ 75 ವರ್ಷಗಳಿಂದ ರಾಜಕಾರಣ ಮಾಡುತ್ತಿದೆ. ದೀನ ದಲಿತರು, ಬಡವರು ಹಾಗೂ ಎಲ್ಲಾ ವರ್ಗವರಿಗೆ ಸಾಮಾಜಿಕ ನ್ಯಾಯ ಕಲ್ಪಿಸಿಕೊಡಲು ಹೋರಾಟ ಮಾಡಿದ ಪಕ್ಷವಾಗಿದೆ ಎಂದರು.

ಈಗಾಗಲೇ ಬಂದಿಗೌಡನಹಳ್ಳಿ ಗ್ರಾಮಕ್ಕೆ ಹೆಚ್ಚಿನ ಅಭಿವೃದ್ದಿ ಕೆಲಸವನ್ನು ಮಾಡುತ್ತಿದ್ದೇವೆ. ಸಮುದಾಯ ಭವನ ನಿರ್ಮಾಣ, ರಸ್ತೆಗಳ ಅಭಿವೃದ್ದಿ, ಸೇತುವೆ ನಿರ್ಮಾಣ ಸೇರಿದಂತೆ ಅನೇಕ ಅಭಿವೃದ್ದಿ ಕೆಲಸಗಳನ್ನು ಮಾಡಿದ್ದೇವೆ. ತಾವೆಲ್ಲರು ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಬೆಂಬಲವನ್ನು ನೀಡಿ, ನಮ್ಮ ಅಭ್ಯರ್ಥಿ ಸುನೀಲ್ ಬೋಸ್ ಅವರನ್ನು ಗೆಲ್ಲಿಸಿಕೊಡಿ ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವ್, ಜಿಲ್ಲಾ ಎಸ್ಸಿ ಬ್ಲಾಕ್ ಅಧ್ಯಕ್ಷ ಸೋಮಣ್ಣ, ಕಾರ್ಮಿಕ ವಿಭಾಗದ ಅಧ್ಯಕ್ಷ ಮಹೇಶ್, ಎಪಿಎಂಸಿ ನಿರ್ದೇಶಕ ಆಲೂರು ಪ್ರದೀಪ್, ಬಿಸಲವಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರಭುಸ್ವಾಮಿ, ಗ್ರಾ.ಪಂ. ಅಧ್ಯಕ್ಷ ರಮ್ಯ ನಾಗರಾಜು, ಮುಖಂಡರಾದ ಬಿಸಲವಾಡಿ ರವಿ, ಬಸವರಜು, ಪ್ರಭುಸ್ವಾಮಿ, ಲೋಕೇಶ್, ವೀರಣ್ಣ, ಪಿ. ಕುಮಾರ್, ಗಣೇಶ್, ಸ್ವಾಮಿ ಆರಾಧ್ಯ, ನಿಂಗರಾಜು, ರವಿಗೌಡ, ದೊಡ್ಡರಾಯಪೇಟೆ ಮೂರ್ತಿ, ಕೆಂಪರಾಜು, ಹೊಸಹಳ್ಳಿ ಮಧುಸೂಧನ್ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net