ಬರ ನಿರ್ವಹಣೆಗೆ ಸಿಗಲಿ ಶೀಘ್ರ ಸ್ಪಂದನೆ

15rajesh1
Published on

ಚಾಮರಾಜನಗರ: ಚಾಮರಾಜನಗರ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆ ಕಾವೇರಿದೆ. ಜನಪ್ರತಿನಿಧಿಗಳು ಇದರತ್ತ ಚಿತ್ತ ನೆಟ್ಟಿದ್ದಾರೆ. ಅಧಿಕಾರಿಗಳು ಚುನಾವಣೆ ಕರ್ತವ್ಯದಲ್ಲಿ ತೊಡಗಿದ್ದಾರೆ. ಈ ಮಧ್ಯೆ ಬರದಿಂದ ಕಂಗೆಟ್ಟಿರುವ ರೈತರ ಸಂಕಷ್ಟಗಳಿಗೆ ಶೀಘ್ರ ಸ್ಪಂದನೆ ದೊರೆಯಬೇಕಾಗಿದೆ.

ಜನರಿಂದ ಆಯ್ಕೆಯಾಗಿರುವ ಜನಪ್ರತಿನಿಧಿಗಳು ಚುನಾವಣೆ ಕಡೆ ಹೆಚ್ಚು ಗಮನ ನೀಡಿದ್ದಾರೆ. ಪ್ರಜಾಪ್ರಭುತ್ವದ ಹಬ್ಬವಾದ ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಲು ಅಧಿಕಾರಿಗಳು ಕರ್ತವ್ಯದಲ್ಲಿ ತೊಡಗಿದ್ದಾರೆ. ಈ ನಡುವೆ ಬರಗಾಲದಿಂದಾಗಿ ರೈತರು ಹಲವು ಸಮಸ್ಯೆ ಎದುರಿಸುತ್ತಿದ್ದಾರೆ. ಪ್ರಮುಖವಾಗಿ ನೀರಿನ ಸಮಸ್ಯೆ, ಮೇವಿನ ಕೊರತೆ, ಅಸಮರ್ಪಕ ವಿದ್ಯುತ್ ಪೂರೈಕೆ ಕುರಿತು ದೂರುಗಳು ಕೇಳಿಬರುತ್ತಿವೆ. ಜಿಲ್ಲಾಡಳಿತ ಅವಶ್ಯಕತೆ ಇರುವ ಕಡೆಗೆ ಮೇವು ಪೂರೈಕೆ ಮಾಡಲು ಸಿದ್ಧವಿದೆ. ಮೇವಿನ ಕೊರತೆ ಇರುವ ಗ್ರಾಮಗಳ ಮಾಹಿತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ವಿಪತ್ತು ನಿರ್ವಹಣಾ ಕೊಠಡಿಯ ಟೋಲ್ ಫ್ರೀ ದೂರವಾಣಿ ಸಂಖ್ಯೆ:1077/08226-223160ಗೆ ಕರೆ ಮಾಡಿ ತಿಳಿಸಲು ಕೋರಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net