ಮತದಾನ ಬಿಹಿಷ್ಕಾರ ನಿರ್ಧಾರ ವಾಪಸ್

23rajesh1
Published on

ಚಾಮರಾಜನಗರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮತದಾನದಿಂದ ದೂರ ಉಳಿಯುವುದಾಗಿ ತಿಳಿಸಿದ್ದ ಬೇಡಗುಳಿ ಗ್ರಾಮಸ್ಥರು ಇದೀಗ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯ ಪ್ರದೇಶ ವ್ಯಾಪ್ತಿಯ ತಾಲೂಕಿನ ಪುಣಜನೂರು ಗ್ರಾಮ ಪಂಚಾಯಿತಿಗೆ ಒಳಪಡುವ ಬೇಡಗುಳಿಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಇದೀಗ ಇಲ್ಲಿಗೆ ತಹಸೀಲ್ದಾರ್ ಬಸವರಾಜು ಸೋಮವಾರ ಭೇಟಿ ನೀಡಿ ಗ್ರಾಮಸ್ಥರ ಮನವೊಲಿಸಿದ್ದಾರೆ. ರಸ್ತೆ, ಕುಡಿಯುವ ನೀರು, ಮನೆಗಳ ನಿರ್ಮಾಣ, ವಸತಿ ಸೌಲಭ್ಯ ಇತರ ಮೂಲಸೌಕರ್ಯ ಒದಗಿಸಬೇಕೆಂದು ಗ್ರಾಮಸ್ಥರು ಇದೇ ವೇಳೆ ಆಗ್ರಹಿಸಿದರು. ಎಲ್ಲ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಮತದಾನ ಬಹಿಷ್ಕಾರ ನಿರ್ಧಾರದಿಂದ ಗ್ರಾಮಸ್ಥರು ಹಿಂದೆ ಸರಿದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net