ವಿ.ಶ್ರೀನಿವಾಸಪ್ರಸಾದ್ ಭಾವಚಿತ್ರಕ್ಕೆ ಪುಷ್ಪನಮನ

29rajesh2
Published on

ಚಾಮರಾಜನಗರ: ಹಿರಿಯ ರಾಜಕಾರಣಿ, ಸಂಸದ ವಿ.ಶ್ರೀನಿವಾಸಪ್ರಸಾದ್ ಅವರ ನಿಧನದ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ವಿ.ಶ್ರೀನಿವಾಸಪ್ರಸಾದ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಕಾಡಾ ಅಧ್ಯಕ್ಷ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪಿ.ಮರಿಸ್ವಾಮಿ ವಾತನಾಡಿ, ಅವಿಭಜಿತ ಮೈಸೂರು ಮತ್ತು ಜಿಲ್ಲೆಯ ಹಿರಿಯ ರಾಜಕಾರಣಿ, ಸಂಸದ ವಿ.ಶ್ರೀನಿವಾಸ್‌ಪ್ರಸಾದ್ ಅವರ ನಿಧನ ರಾಜ್ಯಕ್ಕೆ ತುಂಬಲಾರದ ನಷ್ಟ. 6 ಬಾರಿ ಸಂಸದರಾಗಿ, 2 ಬಾರಿ ಶಾಸಕರಾಗಿ, ಕೇಂದ್ರದ ಸಚಿವರಾಗಿ ಉತ್ತಮ ಸೇವೆ ಸಲ್ಲಿಸಿದ್ದರು. ಅವರ ನಿಧನದ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ಭಗವಂತ ನೀಡಲಿ ಎಂದರು.

ಇದೇ ವೇಳೆ ಒಂದು ನಿಮಿಷ ಮೌನಾಚರಣೆ ವಾಡಲಾಯಿತು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುವಾರ್, ಪ್ರಧಾನ ಕಾರ್ಯದರ್ಶಿ ಚಿಕ್ಕಮಹಾದೇವು, ಎಪಿಎಂಸಿ ಸದಸ್ಯ ಎ.ಎಸ್.ಪ್ರದೀಪ್, ಕೆಪಿಸಿಸಿ ಸದಸ್ಯ ಸಯ್ಯದ್ ರಫಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಹಮದ್ ಅಸ್ಗರ್, ಎ.ಎಸ್.ಗುರುಸ್ವಾಮಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net