

ಗುಂಡ್ಲುಪೇಟೆ: ಪಟ್ಟಣದ ಹೊರವಲಯದಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡು ಮೂಲದ ಐಬಿನ್(24), ಕೇರಳ ಮೂಲದ ಅನ್ಸಿದ್(26) ಬಂಧಿತರು, ಖಚಿತ ಮಾಹಿತಿಯ ಮೇರೆಗೆ ಮಾಡ್ರಹಳ್ಳಿ ಸಮೀಪದ ಎಸ್‌ಎನ್‌ಎಸ್ ನರ್ಸಿಂಗ್ ಕಾಲೇಜು ಬಳಿ ಬೈಕಿನಲ್ಲಿ ಬರುತ್ತಿದ್ದ ಈ ಇಬ್ಬರನ್ನು ವಶಕ್ಕೆ ಪಡೆದು ತಪಾಸಣೆ ಒಳಪಡಿಸಿದಾಗ 2 ಕೆಜಿ ಗಾಂಜಾ ಪತ್ತೆಯಾಗಿದೆ. ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್ ಪರಶಿವಮೂರ್ತಿ, ಸಬ್‌ಇನ್‌ಸ್ಪೆಕ್ಟರ್ ಸಾಹೇಬಗೌಡ, ಸಿಬ್ಬಂದಿ ಇದ್ದರು.