ಆಲೂರಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ

Published on

ಚಾಮರಾಜನಗರ : ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜಯಂತಿಯನ್ನು ಭಾನುವಾರ ವಿಜೃಂಭಣೆಯಿಂದ ಆಚರಿಸಲಾಯಿತು.

ತಾಲೂಕಿನ ಆಲೂರು ಗ್ರಾಮದ ಶ್ರೀಮಂಟೇಸ್ವಾಮಿ ದೇವಸ್ಥಾನದ ಮುಂಭಾಗ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನದ ಪೀಠಿಕೆಯನ್ನು ಒಳಗೊಂಡ ಭಾವಚಿತ್ರವನ್ನು ಆನಾವರಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಹೂವುನಿಂದ ಅಲಂಕೃತವಾದ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ ಪ್ರಾರಂಭವಾಯಿತು. ಶ್ರೀಮಂಟೇಸ್ವಾಮಿ ದೇವಸ್ಥಾನದ ಮುಂಭಾಗದಿಂದ ಸಾಗಿದ ಮೆರವಣಿಗೆ ಶ್ರೀಬಸವೇಶ್ವರ ವೃತ್ತ, ಬರೋಡಾ ಬ್ಯಾಂಕ್ ರಸ್ತೆ, ಶ್ರೀಬೆಳ್ಳಿ ಬಸವೇಶ್ವರ ದೇವಸ್ಥಾನದ ರಸ್ತೆ ಹಾಗೂ ಇನ್ನಿತರ ಪ್ರಮುಖ ರಸ್ತೆಗಳಲ್ಲಿ ಸಾಗಿತು.

ಮೆರವಣಿಗೆಯಲ್ಲಿ ಡೊಳ್ಳು, ನಗಾರಿ ಹಾಗೂ ಜಾನಪದ ಕಲಾ ತಂಡಗಳು ಭಾಗವಹಿಸಿದ್ದವು. ಮೆರವಣಿಗೆಯುದ್ದಕ್ಕೂ ಯುವಕರು ನಗಾರಿ ಶಬ್ದಕ್ಕೆ ಕುಣಿದು ಕಪ್ಪಳಿಸಿದರು. ಮಧ್ಯಾಹ್ನ ಗ್ರಾಮಸ್ಥರಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ಯಜಮಾನರಾದ ಮಲ್ಲಣ್ಣ, ನಂಜುಂಡಸ್ವಾಮಿ, ಮಲ್ಲಣ್ಣ, ಸೀತಾರಾಮು, ಗ್ರಾಪಂ ಸದಸ್ಯ ರವಿಕುಮಾರ್, ಡಾ.ಬಿ.ಆರ್.ಅಂಬೇಡ್ಕರ್ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ಯುವಕರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net