ಚಾಮರಾಜನಗರ : ತಾಲೂಕಿನ ಮರಿಯಾಲ ಗ್ರಾಮದ ಶ್ರೀಮುರುಘರಾಜೇಂದ್ರಸ್ವಾಮಿ ಪ್ರೌಢಶಾಲೆಗೆ 10ನೇ ತರಗತಿ(ಸಿಬಿಎಸ್‌ಇ) ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಲಭಿಸಿದೆ.
ಪರೀಕ್ಷೆಗೆ ಹಾಜರಾದ 12 ವಿದ್ಯಾರ್ಥಿಗಳಲ್ಲಿ 12 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟು ವಿದ್ಯಾರ್ಥಿಗಳಲ್ಲಿ ಚೈತ್ರಾ 464, ಸಿ.ಬಿ.ಭರತ್ ಕುಮಾರ್ 429, ಎಸ್.ಯಶಸ್ವಿನಿ 421, ವೈಷ್ಣವಿ 417 ಅಂಕ ಪಡೆದು ಅತ್ಯುನ್ನತ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. 6 ವಿದ್ಯಾರ್ಥಿಗಳು ಪ್ರಥಮ ದರ್ಜೆ, ಇಬ್ಬರು ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಉತ್ತಮ ಅಂಕ ಗಳಿಸಿ ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ ವಿದ್ಯಾಸಂಸ್ಥೆಯ ಅಧ್ಯಕ್ಷ ಶ್ರೀಇಮ್ಮಡಿ ಮುರುಘರಾಜೇಂದ್ರ ಸ್ವಾಮೀಜಿ, ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಶಿಕ್ಷಕರು ಪ್ರಕಟಣೆಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ.