ಅನ್ನದಾತರಿಗೆ ಅನುಕೂಲ ಕಲ್ಪಿಸಲಿ

Suma
Published on

ಚಾಮರಾಜನಗರ: ಮಳೆಗಾಳಿಯಿಂದಾಗಿ ಒಂದೂವರೆ ಎಕರೆಯಲ್ಲಿ ಬೆಳೆದಿದ್ದ ಬಾಳೆ ಫಸಲು ನೆಲ ಕಚ್ಚಿದೆ ಎಂದು ಹನೂರು ತಾಲೂಕಿನ ಶಾಗ್ಯ ಗ್ರಾಮದ ಸುಮಾ ತಿಳಿಸಿದ್ದಾರೆ.

ಬಿರುಗಾಳಿ ಮಳೆಗೆ ಬೆಳೆ ನಷ್ಟದ ಕುರಿತು ವಿಜಯವಾಣಿಯೊಂದಿಗೆ ಮಾತನಾಡಿರುವವ ಅವರು, ಇದರಿಂದ ಲಕ್ಷಾಂತರ ರೂ. ನಷ್ಟವಾಗಿದೆ. ಆದರೆ ಸರ್ಕಾರದಿಂದ ಬೆಳೆ ನಷ್ಟಕ್ಕೆ ನಿಗದಿಪಡಿಸಿರುವ ಪರಿಹಾರದ ಹಣ ಯಾವುದಕ್ಕೂ ಪ್ರಯೋಜನವಾಗುತ್ತಿಲ್ಲ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವ ಮೂಲಕ ನಷ್ಟವಾಗಿರುವ ಬೆಳೆಗೆ ಸೂಕ್ತ ಪರಿಹಾರ ದೊರಕಿಸಿ ಕೊಡಲು ಕ್ರಮ ವಹಿಸಬೇಕು. ಈ ಮೂಲಕ ಸಂಕಷ್ಟ ಅನುಭವಿಸುತ್ತಿರುವ ರೈತರಿಗೆ ಅನುಕೂಲ ಕಲ್ಪಿಸಬೇಕು ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net