ಬಿತ್ತನೆ ಕಾರ್ಯ ಆರಂಭ

Habib
Published on

ಚಾಮರಾಜನಗರ: ಸದ್ಯಕ್ಕೆ ಜಿಲ್ಲೆಯಲ್ಲಿ ಆಗಿರುವ ಬಿರುಗಾಳಿ ಸಹಿತ ಮಳೆಗೆ ಯಾವುದೇ ಕೃಷಿ ಬೆಳೆಗಳಿಗೆ ಹಾನಿಯಾಗಿಲ್ಲ. ಈ ಬಾರಿ ಪೂರ್ವ ಮುಂಗಾರಿನಲ್ಲಿ ಮಳೆ ಆಗಿರುವುದರಿಂದ ಜಿಲ್ಲೆಯಾದ್ಯಂತ ಕೃಷಿಕರು ಈಗಷ್ಟೇ ಬಿತ್ತನೆ ಕಾರ್ಯ ಆರಂಭಿಸಿದ್ದಾರೆ ಎಂದು ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಹಬೀದ್ ತಿಳಿಸಿದ್ದಾರೆ.

ಬಿರುಗಾಳಿ ಸಹಿತ ಮಳೆಗೆ ಬೆಳೆ ಹಾನಿಯಾಗಿರುವ ಕುರಿತು ವಿಜಯವಾಣಿಯೊಂದಿಗೆ ಮಾತನಾಡಿರುವ ಅವರು, ಇಲಾಖೆಯಿಂದ ಬಿತ್ತನೆ ಬೀಜ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸಾಕಷ್ಟು ಪ್ರಮಾಣದಲ್ಲಿ ಮಳೆ ಆಗುತ್ತಿರುವುದರಿಂದ ಮಳೆಯಾಶ್ರಿತ ಪ್ರದೇಶದ ಕೃಷಿಕರಿಗೆ ಅನುಕೂಲವಾಗುತ್ತದೆ ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net