ಚಾಮರಾಜೇಶ್ವರ ಬ್ರಹ್ಮರಥೋತ್ಸವ ಅಪರೂಪದ್ದು

04raju10
Published on

ಚಾಮರಾಜನಗರ: ಆಷಾಢ ಮಾಸದಲ್ಲಿ ನಡೆಯುವ ಶ್ರೀ ಚಾಮರಾಜೇಶ್ವರ ಬ್ರಹ್ಮರಥೋತ್ಸವ ರಾಜ್ಯದಲ್ಲೇ ಅಪರೂಪದ್ದು ಎಂದು ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಹೇಳಿದರು.

ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಡಾ.ರಾಜ್ಕುಮಾರ್ ಸಾಂಸ್ಕೃತಿಕ ಕಲಾ ವೇದಿಕೆ ಹಾಗೂ ಚಂದ್ರು ಮೆಲೋಡಿಸ್ ವತಿಯಿಂದ ಸೋಮವಾರ ಆಯೋಜಿಸಿದ್ದ ಗೀತಗಾಯನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜಾತ್ರಾ ಮಹೋತ್ಸವದಲ್ಲಿ ನೂತನ ದಂಪತಿಗಳು ಭಾಗವಹಿಸಿ ತೇರಿಗೆ ಹಣ್ಣು-ದವನ ಎಸೆದು ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸುವುದು ವಾಡಿಕೆಯಾಗಿದ್ದು, ನೂತನ ದಂಪತಿಗಳ ಇಷ್ಟಾರ್ಥ ಸಿದ್ಧಿಸಲಿ ಎಂದು ಆಶಿಸಿದರು.

ಬಿವಿಎಸ್ ಪ್ರತಿಷ್ಠಾನ ಅಧ್ಯಕ್ಷ ಬಾಬು, ಪರಿಸರ ಪ್ರೇಮಿ ಸಿ.ಎಂ.ವೆಂಕಟೇಶ್, ಆಜಾದ್ ಹಿಂದು ಸೇನೆ ರಾಜ್ಯಾಧ್ಯಕ್ಷ ಎಂ.ಎಸ್.ಫೃಥ್ವಿರಾಜ್, ಗಡಿ ಯಜಯಾನ ಮಾಧು, ಹೋಟಲ್ ಭಾಗ್ಯ ಮಾಲೀಕ ವಿಜಯ, ನಿತ್ಯ ಸಿಲ್ಕ್ ಮಾಲೀಕ ಪಂಕಜ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net