ಚಾಮರಾಜನಗರ: ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ 2024-25ನೇ ಸಾಲಿನ ಪ್ರಥಮ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಆಹ್ವಾನಿಲಾಗಿದೆ.
ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಒಟ್ಟಾರೆ ಶೇ.35 ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ಮಾಹಿತಿ ಪುಸ್ತಕವನ್ನು ತಾಂತ್ರಿಕ ಶಿಕ್ಷಣ ಇಲಾಖೆಯ ಮೂಲಕ ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿರುವ ಅರ್ಜಿಯನ್ನು ಮೇ.21ರ ಸಂಜೆ 5 ಗಂಟೆಯ ಒಳಗಾಗಿ ಮೂಲ ದಾಖಲಾತಿಗಳೊಂದಿಗೆ ಸಂಸ್ಥೆಯ ಸಹಾಯ ಕೇಂದ್ರದಲ್ಲಿ ಅರ್ಜಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರ ಮೊ.9880451356 ಅಥವಾ ಕಚೇರಿ ದೂರವಾಣಿ ಸಂ: 08226-222578 ಸಂಪರ್ಕಿಸುವಂತೆ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.