ಉಮ್ಮತ್ತೂರು ಜೆಎಸ್‌ಎಸ್ ಶಾಲೆಗೆ ಶೇ.92.18 ಲಿತಾಂಶ

Published on

ಚಾಮರಾಜನಗರ : ತಾಲೂಕಿನ ಉಮ್ಮತ್ತೂರು ಜೆಎಸ್‌ಎಸ್ ಪ್ರೌಢಶಾಲೆ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.92.18 ಲಿತಾಂಶವನ್ನು ಪಡೆದುಕೊಂಡಿದೆ. ಈ ಸಾಲಿನಲ್ಲಿ 64 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. ಅವರಲ್ಲಿ 59 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ವಿದ್ಯಾರ್ಥಿ ಎನ್.ಎಂ.ಪ್ರಸಾದ್ 625 ಅಂಕಗಳಿಗೆ 549 ಅಂಕಗಳನ್ನು ಪಡೆದು ಶಾಲೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿ ಕನ್ನಿಕಾ 524 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಹಾಗೂ ವಿದ್ಯಾರ್ಥಿ ಬಿ. ಮಧುಮತಿ 504 ಅಂಕಗಳನ್ನು ಪಡೆದು ತೃತೀಯ ಸ್ಥಾನ ಸಂಪಾದಿಸಿದ್ದಾರೆ. ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಶಾಲೆಯ ಮುಖ್ಯಶಿಕ್ಷಕರು ಹಾಗೂ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net