ಚಾಮರಾಜನಗರ: ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಶ್ರೀಮಲೆ ಮಹದೇಶ್ವರ ಸ್ವಾಮಿ ಮಜ್ಜನಕ್ಕೆ ಬಳಸಲು ಬಾವಿ ಮಳೆಯಿಂದ ಮುಳುಗಡೆಯಾಗಿದೆ.
ನಂದನವನಕ್ಕೆ ನೀರು ನುಗ್ಗದಂತೆ ಹಾಗೂ ಮಜ್ಜನಬಾವಿ ಮುಳುಗಡೆಯಾಗದಂತೆ ಅಗತ್ಯ ಕ್ರಮವಹಿಸುವಂತೆ ಶ್ರೀ ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ ಅರ್ಚಕರು ಹಾಗೂ ಭಕ್ತರು ಮನವಿ ಮಾಡುತ್ತಲೇ ಬಂದಿದ್ದಾರೆ. ಆದರೆ ಈವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಈ ಬಗ್ಗೆ ಭಕ್ತರು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪವನ್ನು ಆಗಾಗ್ಗೆ ವ್ಯಕ್ತಪಡಿಸುತ್ತಲೇ ಇದ್ದಾರೆ.