ಮೇ16ರಂದು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Published on

ಚಾಮರಾಜನಗರ: ಚಾಮರಾಜನಗರ ವಿಶ್ವವಿದ್ಯಾನಿಲಯದ ವತಿಯಿಂದ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವನ್ನು ಮೇ 16ರಂದು ಬೆಳಗ್ಗೆ 10.30 ಗಂಟೆಗೆ ವಿಶ್ವವಿದ್ಯಾನಿಲಯದ ಸುವರ್ಣಗಂಗೋತ್ರಿಯ ನಿಜಗುಣ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಚಾಮರಾಜನಗರ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎಂ.ಆರ್. ಗಂಗಾಧರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಉಪಕುಲಸಚಿವ ಡಾ. ವಿ.ಜಿ. ಸಿದ್ದರಾಜು, ಸಂಪನ್ಮೂಲ ವ್ಯಕ್ತಿಗಳು ಹಾಗೂ ಮಲೆಮಹದೇಶ್ವರ ಬೆಟ್ಟ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ರಘು, ಮೈಸೂರಿನ ಗ್ಲೋಬಲ್ ಅಕಾಡೆಮಿ ಸಂಸ್ಥಾಪಕ ರಾಜೇಶ್, ಸಮಾಜ ಕಲ್ಯಾಣ ಇಲಾಖೆಯ ಪೃಥ್ವಿರಾಜ್ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net