ಜೆಎಸ್‌ಎಸ್ ಪಬ್ಲಿಕ್ ಶಾಲೆಗೆ ಶೇ.100 ರಷ್ಟು ಫಲಿತಾಂಶ

sheha haram
Published on

ಚಾಮರಾಜನಗರ: ನಗರದ ಜೆಎಸ್‌ಎಸ್ ಪಬ್ಲಿಕ್ ಶಾಲೆಯು 2023-24ನೇ ಸಾಲಿನ ಸಿಬಿಎಸ್ಸಿ 10ನೇ ತರಗತಿ ಪರೀಕ್ಷಾ ಫಲಿತಾಂಶದಲ್ಲಿ ಶೇ.100 ರಷ್ಟು ಸಾಧನೆ ಮಾಡಿದೆ.

ಜೆಎಸ್‌ಎಸ್ ಪಬ್ಲಿಕ್ ಶಾಲೆಯು ಸತತ 5ನೇ ಬಾರಿಗೆ ಶೇ.100 ರಷ್ಟು ಫಲಿತಾಂಶ ಪಡೆದಿದೆ. ಪರೀಕ್ಷೆ ಬರೆದಿದ್ದ 22 ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿ ಶಾಹೇ ಹರಾಂ 600ಕ್ಕೆ 577 ಅಂಕಗಳನ್ನು ಪಡೆದು ಶೇ. 96.17 ರಷ್ಟು ಲಿತಾಂಶದೊಂದಿಗೆ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಶಾಲೆಯ ಎಲ್ಲ 22 ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಪಡೆದು ಉತ್ತೀರ್ಣರಾಗಿದ್ದಾರೆ. ಶಾಲೆಯ 10 ವಿದ್ಯಾರ್ಥಿಗಳು ಶೇ.90ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದುಕೊಂಡಿದ್ದಾರೆ. ಎಚ್.ಯು. ಶ್ರೇಯಾ ಶೇ. 95 ರಷ್ಟು ಅಂಕ ಪಡೆದು ದ್ವೀತಿಯ ಹಾಗೂ ಯಶಸ್ವಿನಿ ಶೇ. 94.83 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದು, ಕನ್ನಡದಲ್ಲಿ ವರ್ಷಿಣಿ 100 ಅಂಕಗಳು, ಸೋಷಿಯಲ್ ಸೈನ್ಸ್‌ನಲ್ಲಿ ಬಿ.ಶಶಾಂಕ್ ಹಾಗೂ ಜೀವನ್ ಐಟಿಯಲ್ಲಿ ಶೇ.100 ಅಂಕಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ ಎಂದು ಪ್ರಾಂಶುಪಾಲ ಎಚ್.ಎಂ.ಉಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net